Mysore
20
clear sky

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ಪರಿಷತ್‌ ಚುನಾವಣೆ: ಕೈ ಅಭ್ಯರ್ಥಿ ಮರಿತಿಬ್ಬೇಗೌಡ ನಾಳೆ(ಮೇ.೧೪) ನಾಮಪತ್ರ ಸಲ್ಲಿಕೆ

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್  ಅಭ್ಯರ್ಥಿಯಾದ ಮರಿತಿಬ್ಬೇಗೌಡ  ನಾಳೆ(ಮೇ.೧೪) ನಾಮಪತ್ರ ಸಲ್ಲಿಸಲಿದ್ದಾರೆ.

ನಗರದ ಕಲಾಮಂದಿರದ ಎದುರಿನಿಂದ ಪ್ರಾದೇಶಿಕ ಆಯುಕ್ತರ ಕಛೇರಿಯವರೆಗೆ ಮೆರವಣಿಗೆ ನಡೆಸಿ ಬಳಿಕ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆ ಹಿನ್ನೆಲೆ ಸಭೆ: ಪಡುವಾರಹಳ್ಳಿಯ ಲೀಲಾ ಚೆನ್ನಯ್ಯ ಕಲ್ಯಾಣ ಮಂಟಪದಲ್ಲಿ ನಾಳೆ (ಮೇ.೧೪) ಬೆಳಗ್ಗೆ 11.00 ಕ್ಕೆ ಮೈಸೂರು, ಚಾಮರಾಜನಗರ, ಹಾಸನ ಹಾಗೂ ಮಂಡ್ಯದ ಜಿಲ್ಲೆಗಳ ಪ್ರಮುಖರು ಹಾಗೂ ಕಾರ್ಯಕರ್ತರ ಸಭೆ ಏರ್ಪಡಿಸಲಾಗಿದೆ.

ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಸಚಿವರು ಆದ ಡಾ| ಹೆಚ್.ಸಿ. ಮಹದೇವಪ್ಪ, ಪಶುಸಂಗೋಪನಾ ಸಚಿವರಾದ  ಕೆ. ವೆಂಕಟೇಶ್‌ , ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ  ತಸ್ವೀರ್ ಸೇಠ್‌, ಶಾಸಕ ಕೆ. ಹರೀಶ್‌ ಗೌಡ, ಅನಿಲ್ ಚಿಕ್ಕಮಾದು, ದರ್ಶನ್ ಧೃವನಾರಾಯಣ್‌ ಸೇರಿದಂತೆ ಮೊದಲಾದವರು ಭಾಗವಹಿಸಲಿದ್ದಾರೆ.

ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಮೈಸೂರು, ಚಾಮರಾಜನಗರ, ಹಾಸನ ಹಾಗೂ ಮಂಡ್ಯ ಜಿಲ್ಲೆಯ ಕಾಂಗ್ರೆಸ್‌ ಕಾರ್ಯಕರ್ತರು, ಪದಾಧಿಕಾರಿಗಳು, ಮುಂಚೂಣಿ ಘಟಕದ ಅಧ್ಯಕ್ಷರು  ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸಬೇಕು ಎಂದು ಮೈಸೂರು ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಿ.ಈಶ್ವರಿ ಚಕ್ಕಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:
error: Content is protected !!