ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಮರಿತಿಬ್ಬೇಗೌಡ ನಾಳೆ(ಮೇ.೧೪) ನಾಮಪತ್ರ ಸಲ್ಲಿಸಲಿದ್ದಾರೆ.
ನಗರದ ಕಲಾಮಂದಿರದ ಎದುರಿನಿಂದ ಪ್ರಾದೇಶಿಕ ಆಯುಕ್ತರ ಕಛೇರಿಯವರೆಗೆ ಮೆರವಣಿಗೆ ನಡೆಸಿ ಬಳಿಕ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆ ಹಿನ್ನೆಲೆ ಸಭೆ: ಪಡುವಾರಹಳ್ಳಿಯ ಲೀಲಾ ಚೆನ್ನಯ್ಯ ಕಲ್ಯಾಣ ಮಂಟಪದಲ್ಲಿ ನಾಳೆ (ಮೇ.೧೪) ಬೆಳಗ್ಗೆ 11.00 ಕ್ಕೆ ಮೈಸೂರು, ಚಾಮರಾಜನಗರ, ಹಾಸನ ಹಾಗೂ ಮಂಡ್ಯದ ಜಿಲ್ಲೆಗಳ ಪ್ರಮುಖರು ಹಾಗೂ ಕಾರ್ಯಕರ್ತರ ಸಭೆ ಏರ್ಪಡಿಸಲಾಗಿದೆ.
ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಸಚಿವರು ಆದ ಡಾ| ಹೆಚ್.ಸಿ. ಮಹದೇವಪ್ಪ, ಪಶುಸಂಗೋಪನಾ ಸಚಿವರಾದ ಕೆ. ವೆಂಕಟೇಶ್ , ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ತಸ್ವೀರ್ ಸೇಠ್, ಶಾಸಕ ಕೆ. ಹರೀಶ್ ಗೌಡ, ಅನಿಲ್ ಚಿಕ್ಕಮಾದು, ದರ್ಶನ್ ಧೃವನಾರಾಯಣ್ ಸೇರಿದಂತೆ ಮೊದಲಾದವರು ಭಾಗವಹಿಸಲಿದ್ದಾರೆ.
ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಮೈಸೂರು, ಚಾಮರಾಜನಗರ, ಹಾಸನ ಹಾಗೂ ಮಂಡ್ಯ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು, ಪದಾಧಿಕಾರಿಗಳು, ಮುಂಚೂಣಿ ಘಟಕದ ಅಧ್ಯಕ್ಷರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸಬೇಕು ಎಂದು ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಡಿ.ಈಶ್ವರಿ ಚಕ್ಕಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ : ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ 50 ಸಾವಿರ ಕೋಟಿ ಅನುದಾನ ದುರುಪಯೋಗವಾಗಿದೆ ಎಂದು…
ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಿಎಂ ಬದಲಾವಣೆ…
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…