ಮೈಸೂರು: ಐನ್‌ಡಿಐಎ ಮೈತ್ರಿಕೂಟದ ಡಿಎಂಕೆ ಪಕ್ಷದೊಂದಿಗೆ ದೊಸ್ತಿಗಾಗಿ ತಮಿಳುನಾಡಿದ ಕಾವೇರಿ ಕೊಟ್ಟು ಆಡಳತಾರೂಢ ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರನ್ನು ಬಲಿಕೊಡುತ್ತಿದೆ. ಇದಕ್ಕೆ ರಾಜ್ಯದ ಜನತೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಂಎಲ್‌ಸಿ ಎಚ್. ವಿಶ್ವನಾಥ್ ಹೇಳಿದ್ದಾರೆ.
ಕಾವೇರಿಯಲ್ಲಿ ನೀರಿಲ್ಲದಿದ್ದರೂ, ತಮಿಳುನಾಡಿಗೆ ಕಾವೇರಿ ಬಿಟ್ಟುಕೊಟ್ಟು ಇಂಡಿಯಾ ಮಿತ್ರ ಬಣ ಮೆಚ್ಚಿಸಲು ಕಾಂಗ್ರೆಸ್ ಮುಂದಾಗಿದೆ. ಬೆಂಗಳೂರಿಗೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಆದರೇ ಸಿಎಂ ಸಿದ್ದರಾಮಯ್ಯ ಅವರು ಬರ ಬಂದಿದೆ ಎಂದು ಹೇಳುತ್ತಿದ್ದಾರೆ. ಹಾಗಾದರೇ ತಮಿಳುನಾಡಿಗೆ ಕಾವೇರಿ ಹರಿಸಲು ಎಲ್ಲಿಂದ ನೀರು ಬಂದು ಎಂದು ಪ್ರಶ್ನಿಸಿದ್ದಾರೆ.
ದೊಡ್ಡ ಗೌಡರು ಕಾವೇರಿಗಾಗಿ ಹಲವಾರು ಹೋರಾಟಗಳನ್ನು ನಡೆಸಿದವರು, ಆದರೆ ಸಿಎಂ ಸಿದ್ದರಾಮಯ್ಯ ಅವರು ಇವರ ಬಗ್ಗ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಇದಕ್ಕೆಲ್ಲಾ ಮತದಾರ ಪ್ರಭುಗಳು ಉತ್ತರ ನೀಡಲಿದ್ದಾರೆ ಎಂದರು.
ಇನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ, ಜನರಿಂದ ಸಕಾರಾತ್ಮಕ ಸ್ಪಂದನೆ ಬರುತ್ತಿದ್ದು, ಮೈತ್ರಿ ಅಭ್ಯರ್ಥಿ ಪರವಾದ ಅಲೆ ನಿರ್ಮಾಣವಾಗಿದೆ. ಈ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ರಾಜವಂಶಸ್ಥರನ್ನು ಅವಿರೋಧವಾಗಿ ಆಯ್ಕೆ ಮಾಡುವ ಉದಾರ ಮನಸ್ಥಿತಿ ಕಾಂಗ್ರೆಸ್ ಸರ್ಕಾರಕ್ಕೆ ಇರಬೇಕಿತ್ತು ಎಂದು ಬೇಸರ ವ್ಯಕ್ತಪಡಿಸಿದರು.
ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23)…
ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ…
ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್…
ನ್ಯೂಯಾರ್ಕ್ : ಲ್ಯಾಂಡಿಂಗ್ ವೇಳೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಫೈರ್ ಟ್ರಕ್‌ಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ…
ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್‌ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ…
ಬೆಂಗಳೂರು : ಹೆಚ್ಚುವರಿಯಾಗಿ ಒಂದು ಸಾವಿರ ವಾಣಿಜ್ಯ ಸಿಲಿಂಡರ್ ಪೂರೈಕೆ ಮಾಡುವುದಾಗಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಗ್ಯಾಸ್ ಕಂಪನಿಗಳು ಮತ್ತು…