ಮೈಸೂರು

ಇಂಡಿಯಾ ದೋಸ್ತಿಗಾಗಿ ರಾಜ್ಯದ ರೈತರನ್ನು ಬಲಿಕೊಟ್ಟ ಸರ್ಕಾರ: ಹಳ್ಳಿಹಕ್ಕಿ

ಮೈಸೂರು: ಐನ್‌ಡಿಐಎ ಮೈತ್ರಿಕೂಟದ ಡಿಎಂಕೆ ಪಕ್ಷದೊಂದಿಗೆ ದೊಸ್ತಿಗಾಗಿ ತಮಿಳುನಾಡಿದ ಕಾವೇರಿ ಕೊಟ್ಟು ಆಡಳತಾರೂಢ ಕಾಂಗ್ರೆಸ್‌ ಸರ್ಕಾರ ರಾಜ್ಯದ ರೈತರನ್ನು ಬಲಿಕೊಡುತ್ತಿದೆ. ಇದಕ್ಕೆ ರಾಜ್ಯದ ಜನತೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಂಎಲ್‌ಸಿ ಎಚ್‌. ವಿಶ್ವನಾಥ್‌ ಹೇಳಿದ್ದಾರೆ.

ಕಾವೇರಿಯಲ್ಲಿ ನೀರಿಲ್ಲದಿದ್ದರೂ, ತಮಿಳುನಾಡಿಗೆ ಕಾವೇರಿ ಬಿಟ್ಟುಕೊಟ್ಟು ಇಂಡಿಯಾ ಮಿತ್ರ ಬಣ ಮೆಚ್ಚಿಸಲು ಕಾಂಗ್ರೆಸ್‌ ಮುಂದಾಗಿದೆ. ಬೆಂಗಳೂರಿಗೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಆದರೇ ಸಿಎಂ ಸಿದ್ದರಾಮಯ್ಯ ಅವರು ಬರ ಬಂದಿದೆ ಎಂದು ಹೇಳುತ್ತಿದ್ದಾರೆ. ಹಾಗಾದರೇ ತಮಿಳುನಾಡಿಗೆ ಕಾವೇರಿ ಹರಿಸಲು ಎಲ್ಲಿಂದ ನೀರು ಬಂದು ಎಂದು ಪ್ರಶ್ನಿಸಿದ್ದಾರೆ.

ದೊಡ್ಡ ಗೌಡರು ಕಾವೇರಿಗಾಗಿ ಹಲವಾರು ಹೋರಾಟಗಳನ್ನು ನಡೆಸಿದವರು, ಆದರೆ ಸಿಎಂ ಸಿದ್ದರಾಮಯ್ಯ ಅವರು ಇವರ ಬಗ್ಗ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಇದಕ್ಕೆಲ್ಲಾ ಮತದಾರ ಪ್ರಭುಗಳು ಉತ್ತರ ನೀಡಲಿದ್ದಾರೆ ಎಂದರು.

ಇನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ, ಜನರಿಂದ ಸಕಾರಾತ್ಮಕ ಸ್ಪಂದನೆ ಬರುತ್ತಿದ್ದು, ಮೈತ್ರಿ ಅಭ್ಯರ್ಥಿ ಪರವಾದ ಅಲೆ ನಿರ್ಮಾಣವಾಗಿದೆ. ಈ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ರಾಜವಂಶಸ್ಥರನ್ನು ಅವಿರೋಧವಾಗಿ ಆಯ್ಕೆ ಮಾಡುವ ಉದಾರ ಮನಸ್ಥಿತಿ ಕಾಂಗ್ರೆಸ್‌ ಸರ್ಕಾರಕ್ಕೆ ಇರಬೇಕಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

4 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

5 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

5 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

5 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

6 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

6 hours ago