ಮೈಸೂರು: ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಸೇಡಿನ ರಾಜಕಾರಣ ಹೆಚ್ಚಾಗಿದೆ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಬಗ್ಗೆ ವರುಣಾ ಕ್ಷೇತ್ರದಲ್ಲಿಂದು ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗೆ ಇಳಿಸುವ ಪ್ರಯತ್ನ ನಡೆಯುತ್ತಿದೆ.
ಇದು ಕೇವಲ ಸಿದ್ದರಾಮಯ್ಯ ಅವರ ಪ್ರಶ್ನೆಯಲ್ಲ. ಇಂದು ಕಾಂಗ್ರೆಸ್‌ಗೆ ಆದ ನೋವನ್ನು ಮುಂದೆ ಎಲ್ಲಾ ವಿರೋಧ ಪಕ್ಷಗಳು ಅನುಭವಿಸಬಹುದು ಎಂದು ಅಸಮಾಧಾನ ಹೊರಹಾಕಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸೇಡಿನ ರಾಜಕಾರಣ ಮುಂದುವರಿದರೆ ಮುಂದೆ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಲ್ಲ ಎಂದು ಎಚ್ಚರಿಕೆ ನೀಡಿದರು.