ಮೈಸೂರು: ತಮ್ಮ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಜಾತಿ ಜನಗಣತಿ ಮುಂದೆ ತಂದಿದ್ದಾರೆ ಎಂಬ ಪ್ರತಾಪ್ ಸಿಂಹ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಎಂ.ಎಲ್.ಸಿ ಯತೀಂದ್ರ ಸಿದ್ದರಾಮಯ್ಯ ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಇದೆಲ್ಲಾ ಮಾಡೋ ವ್ಯಕ್ತಿ ಅಲ್ಲ ಎಂದು ಪ್ರತಾಪ್ ಸಿಂಹಗೆ ಟಾಂಗ್ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರದೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಸಿಎಂ ಸಿದ್ದರಾಮಯ್ಯ ಖುರ್ಚಿಗೆ ಯಾವುದೇ ಅಪಾಯ ಇಲ್ಲ. ಅವರ ಹಿಂದೆ ಹೈ ಕಮಾಂಡ್ ಇದೆ. ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಜಾತಿಗಣತಿ ಬಿಡುಗಡೆ ಮಾಡೋದಾಗಿ ಹೇಳಿದ್ದೇವೆ. ಈ ಮಾತಿನಂತೆ ಜಾತಿಗಣತಿ ವಿಚಾರವಾಗಿ ದ್ವನಿ ಎತ್ತಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ:- ಜನರ ದಿಕ್ಕು ತಪ್ಪಿಸುತ್ತಿರುವ ಬಿಜೆಪಿ ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ
ಜನಸಂಖ್ಯಾ ಆಧಾರದ ಮೇಲೆ ಮೀಸಲಾತಿ ಹೆಚ್ಚಿಗೆ ಸಿಗತ್ತೆ. ಜಾತಿಗಣತಿ ಬಿಡುಗಡೆಯಿಂದ ಎಲ್ಲರಿಗೂ ನ್ಯಾಯ ಸಿಗತ್ತೆ ಎಂದು ಭರವಸೆ ನೀಡಿದರು.
ಕೃತ್ಯ ಎಸಗಿದವರ ಬಂಧನಕ್ಕೆ ಸೂಚನೆ
ಇನ್ನೂ ವರುಣಾ ವ್ಯಾಪ್ತಿಯ ವಾಜಮಂಗಳದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಗ್ರಾಮದಲ್ಲಿ ಸಭೆ ಮಾಡಿ ಕೃತ್ಯ ಎಸಗಿದವರನ್ನು ಬಂಧಿಸಿ ಎಂದು ಸೂಚನೆ ನೀಡಿದ್ದೇನೆ.
ಪೊಲೀಸರು ಕೆಲ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಯಾರೇ ತಪ್ಪು ಮಾಡಿದ್ರು ಕೂಡ ಶಿಕ್ಷೆ ಆಗುತ್ತದೆ ಎಂದು ಹೇಳಿದರು.





