ಮೈಸೂರು

ಜಾತಿ ಜನಗಣತಿ | ಪ್ರತಾಪ್ ಸಿಂಹಗೆ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಟಾಂಗ್‌

ಮೈಸೂರು: ತಮ್ಮ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಜಾತಿ ಜನಗಣತಿ ಮುಂದೆ ತಂದಿದ್ದಾರೆ ಎಂಬ ಪ್ರತಾಪ್ ಸಿಂಹ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಎಂ.ಎಲ್‌.ಸಿ ಯತೀಂದ್ರ ಸಿದ್ದರಾಮಯ್ಯ ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಇದೆಲ್ಲಾ ಮಾಡೋ ವ್ಯಕ್ತಿ ಅಲ್ಲ ಎಂದು ಪ್ರತಾಪ್‌ ಸಿಂಹಗೆ ಟಾಂಗ್‌ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರದೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಸಿಎಂ ಸಿದ್ದರಾಮಯ್ಯ ಖುರ್ಚಿಗೆ ಯಾವುದೇ ಅಪಾಯ ಇಲ್ಲ. ಅವರ ಹಿಂದೆ ಹೈ ಕಮಾಂಡ್‌ ಇದೆ. ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಜಾತಿಗಣತಿ ಬಿಡುಗಡೆ ಮಾಡೋದಾಗಿ ಹೇಳಿದ್ದೇವೆ. ಈ ಮಾತಿನಂತೆ ಜಾತಿಗಣತಿ ವಿಚಾರವಾಗಿ ದ್ವನಿ ಎತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:- ಜನರ ದಿಕ್ಕು ತಪ್ಪಿಸುತ್ತಿರುವ ಬಿಜೆಪಿ ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್​ ಕಿಡಿ

ಜನಸಂಖ್ಯಾ ಆಧಾರದ ಮೇಲೆ ಮೀಸಲಾತಿ ಹೆಚ್ಚಿಗೆ ಸಿಗತ್ತೆ. ಜಾತಿಗಣತಿ ಬಿಡುಗಡೆಯಿಂದ ಎಲ್ಲರಿಗೂ ನ್ಯಾಯ ಸಿಗತ್ತೆ ಎಂದು ಭರವಸೆ ನೀಡಿದರು.

ಕೃತ್ಯ ಎಸಗಿದವರ ಬಂಧನಕ್ಕೆ ಸೂಚನೆ

ಇನ್ನೂ ವರುಣಾ ವ್ಯಾಪ್ತಿಯ ವಾಜಮಂಗಳದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಗ್ರಾಮದಲ್ಲಿ ಸಭೆ ಮಾಡಿ ಕೃತ್ಯ ಎಸಗಿದವರನ್ನು ಬಂಧಿಸಿ ಎಂದು ಸೂಚನೆ ನೀಡಿದ್ದೇನೆ.
ಪೊಲೀಸರು ಕೆಲ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಯಾರೇ ತಪ್ಪು ಮಾಡಿದ್ರು ಕೂಡ ಶಿಕ್ಷೆ ಆಗುತ್ತದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

3 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

4 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

4 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

4 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

5 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

5 hours ago