ನಂಜನಗೂಡು: ತಾಲ್ಲೂಕಿನ ಹೆಬ್ಯಾ ಗ್ರಾಮದ ಸಿದ್ದರಾಮೇಶ್ವರ ದೇವಸ್ಥಾನಕ್ಕೆ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಭೇಟಿ ನೀಡಿ ತಂದೆ-ತಾಯಿಯ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿಸಿದರು.
ವರುಣಾ ವಿಧಾನಸಭಾ ಕ್ಷೇತ್ರದ ಚಿಕ್ಕಯ್ಯನ ಛತ್ರ ತಾಂಡವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಯಾ ಗ್ರಾಮದ ಸಿದ್ದರಾಮೇಶ್ವರ ದೇವರ ಮೂರ್ತಿಗೆ ಇಂದು ಬೆಳ್ಳಿ ಕವಚ ಧಾರಣೆ ಹಾಗೂ ಹೋಮ ಹವನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಗ್ರಾಮಸ್ಥರ ಮನವಿ ಮೇರೆಗೆ ದೇವಸ್ಥಾನದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಹೆಸರಿನಲ್ಲಿ ಅರ್ಚನೆ ಮಾಡಿಸಿದರು.
ಈ ವೇಳೆ ದೇವಾಲಯದ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಜೊತೆಗೂಡಿ ಯತೀಂದ್ರ ಸಿದ್ದರಾಮಯ್ಯರಿಗೆ ಸನ್ಮಾನಿಸಿ ಅಭಿನಂದಿಸಿದರು.





