Mysore
23
overcast clouds

Social Media

ಶುಕ್ರವಾರ, 19 ಡಿಸೆಂಬರ್ 2025
Light
Dark

ದೇಶ ಮುನ್ನಡೆಸಲು ಮೋದಿ ಅವಶ್ಯಕ: ಯದುವೀರ್‌ ಪರ ಮತಯಾಚಿಸಿದ ಶ್ರೀವತ್ಸ!

ಮೈಸೂರು: ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ರಿಗೆ ಕೃಷ್ಣರಾಜ ಕ್ಷೇತ್ರದಲ್ಲಿ ಒಂದು ಲಕ್ಷ ಮತಗಳ ಲೀಡ್ ದೊರೆಯಲಿದೆ ಎಂದು ಶಾಸಕ ಟಿ.ಎಸ್. ಶ್ರೀವತ್ಸ ಅಭಿಪ್ರಾಯಪಟ್ಟರು.

ಬಿಜೆಪಿ ಪಕ್ಷದ ಪರವಾಗಿ ವಿದ್ಯಾರಣ್ಯಪುರಂನಲ್ಲಿ ಭಾನುವಾರ ಮನೆ ಮನೆಗಳಿಗೆ ತೆರಳಿ ಪ್ರಚಾರ ನಡೆಸಿ ಮಾತನಾಡಿದ ಅವರು ದೇಶವನ್ನು ಮುನ್ನಡೆಸಲು ನರೇಂದ್ರ ಮೋದಿ ಸಮರ್ಥರು ಎಂಬುದು ದೇಶದ ಜನತೆಗೆ ಮನವರಿಕೆಯಾಗಿದೆ. ಆದ್ದರಿಂದ ಮೋದಿ ಮತ್ತೋಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹತ್ತು ವರ್ಷಗಳಲ್ಲಿ ದೇಶದಲ್ಲಿ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗಿವೆ. ಭಾರತವನ್ನು ವಿಶ್ವಗುರು ಆಗಿಸುವ ನಿಟ್ಟಿನಲ್ಲಿ ಪ್ರಧಾನಿ ಶ್ರಮಿಸುತ್ತಿದ್ದಾರೆ. ಜನಪರ ಮತ್ತು ಪಾರದರ್ಶಕ ಆಡಳಿತದ ಜತೆಗೆ ದೇಶದ ಸಂಸ್ಕೃತಿ, ಪರಂಪರೆಯನ್ನು ಎತ್ತಿ ಹಿಡಿಯುವ ಕೆಲಸನನ್ನೂ ಅವರು ಮಾಡಿದ್ದಾರೆ ಎಂದರು.

ಎಸಿ ಮೋರ್ಚಾ ನಗರ ಘಟಕದ ಅಧ್ಯಕ್ಷ ವಿ.ಶೈಲೇಂದ್ರ, ಮೈಸೂರು ನಗರ ಘಟಕದ ಉಪಾಧ್ಯಕ್ಷ ಜೋಗಿ ಮಂಜು, ಮುಖಂಡರಾದ ಪಾರ್ಥಸಾಥಿ, ರಮೇಶ್‌, ಜಗದೀಶ್‌ ಸೇರಿದಂತೆ ಮುಖಂಡರು ಇದ್ದರು.

Tags:
error: Content is protected !!