ಮೈಸೂರು: ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ರಿಗೆ ಕೃಷ್ಣರಾಜ ಕ್ಷೇತ್ರದಲ್ಲಿ ಒಂದು ಲಕ್ಷ ಮತಗಳ ಲೀಡ್ ದೊರೆಯಲಿದೆ ಎಂದು ಶಾಸಕ ಟಿ.ಎಸ್. ಶ್ರೀವತ್ಸ ಅಭಿಪ್ರಾಯಪಟ್ಟರು.
ಬಿಜೆಪಿ ಪಕ್ಷದ ಪರವಾಗಿ ವಿದ್ಯಾರಣ್ಯಪುರಂನಲ್ಲಿ ಭಾನುವಾರ ಮನೆ ಮನೆಗಳಿಗೆ ತೆರಳಿ ಪ್ರಚಾರ ನಡೆಸಿ ಮಾತನಾಡಿದ ಅವರು ದೇಶವನ್ನು ಮುನ್ನಡೆಸಲು ನರೇಂದ್ರ ಮೋದಿ ಸಮರ್ಥರು ಎಂಬುದು ದೇಶದ ಜನತೆಗೆ ಮನವರಿಕೆಯಾಗಿದೆ. ಆದ್ದರಿಂದ ಮೋದಿ ಮತ್ತೋಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹತ್ತು ವರ್ಷಗಳಲ್ಲಿ ದೇಶದಲ್ಲಿ ಅಭಿವೃದ್ಧಿ ಕಾರ್ಯಗಳು ಭರದಿಂದ ಸಾಗಿವೆ. ಭಾರತವನ್ನು ವಿಶ್ವಗುರು ಆಗಿಸುವ ನಿಟ್ಟಿನಲ್ಲಿ ಪ್ರಧಾನಿ ಶ್ರಮಿಸುತ್ತಿದ್ದಾರೆ. ಜನಪರ ಮತ್ತು ಪಾರದರ್ಶಕ ಆಡಳಿತದ ಜತೆಗೆ ದೇಶದ ಸಂಸ್ಕೃತಿ, ಪರಂಪರೆಯನ್ನು ಎತ್ತಿ ಹಿಡಿಯುವ ಕೆಲಸನನ್ನೂ ಅವರು ಮಾಡಿದ್ದಾರೆ ಎಂದರು.
ಎಸಿ ಮೋರ್ಚಾ ನಗರ ಘಟಕದ ಅಧ್ಯಕ್ಷ ವಿ.ಶೈಲೇಂದ್ರ, ಮೈಸೂರು ನಗರ ಘಟಕದ ಉಪಾಧ್ಯಕ್ಷ ಜೋಗಿ ಮಂಜು, ಮುಖಂಡರಾದ ಪಾರ್ಥಸಾಥಿ, ರಮೇಶ್, ಜಗದೀಶ್ ಸೇರಿದಂತೆ ಮುಖಂಡರು ಇದ್ದರು.
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…