ಮೈಸೂರು: ಮಂಡ್ಯ ಸಂಸದೆ ಸುಮಲತ ಅಂಬರೀಶ್ ಬಿಜೆಪಿ ಸೇರ್ಪಡೆ ಬಳಿಕ ಇಂದು ಮೈಸೂರಿನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ವೇದಿಕೆ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡು, ಅಂದು ನಾನು ಪಕ್ಷೇತರ ಇಂದು ಬಿಜೆಪಿ ಎಂದು ಅಬ್ಬರದ ಭಾಷಣ ಮಾಡಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಪರ ಮೋದಿ ಮತಯಾಚನೆ ಮಾಡಿದ ಕ್ಷಣವನ್ನು ನೆನಪಿಸಿಕೊಂಡು, ಸಂಸದೆಯಾದಾಗ ಮೋದಿ ತಮ್ಮ ಮಂಡ್ಯ ಜಿಲ್ಲೆಗೆ ನೀಡಿದ ಅನುದಾನದ ಬಗ್ಗೆ ನೆನೆದರು.
ಇಂದು ಭಾರತ ದೇಶ ವಿಶ್ವದ ಪಟ್ಟಿಯಲ್ಲಿ ಅಭಿವೃದ್ಧಿಯ ಮೂಲಕ ತನ್ನ ಸ್ಥಾನ ಗಿಟ್ಟಿಸಿಕೊಂಡಿದೆ. ಅಭಿವೃದ್ಧಿಯೆ ಮೂಲ ಮಂತ್ರ ಎಂದು ಜಪಿಸುತ್ತಿರುವ ಮೋದಿಯ ಕೊಡುಗೆಗಳ ಬಗ್ಗೆ ಮಾತನಾಡುವುಕ್ಕೆ ನಾಲ್ಕು ಐದು ದಿನ ಬೇಕಾಗುತ್ತದೆ ಎಂದು ಕೊಂಡಾಡಿದರು.
ಕಳೆದ ಹತ್ತು ವರ್ಷಗಳಲ್ಲಿ ನೀವು ನೋಡಿರುವುದು ಬರಿ ಟ್ರೈಲರ್ ಅಷ್ಟೇ ಪಿಚ್ಚರ್ ಅಭಿ ಬಾಕಿ ಹೈ, ಮತ್ತೊಮ್ಮೆ ಮೋದಿ ಸರ್ಕಾರ ಬರುವುದು ನಿಶ್ಚಿತ. 2047 ದ ಹೊತ್ತಿಗೆ ಭಾರತ ದೇಶ ವಿಶ್ವದಲ್ಲೇ ಪ್ರಥಮ ಸ್ಥಾನ ಅಲಂಕರಿಸುವ ವಿಕಸಿತ ಸಂಕಲ್ಪ ಭಾರತಕ್ಕೆ ಶಕ್ತಿ ತುಂಬ ಬೇಕಿದೆ ಎಂದರು.
ಬಿಜೆಪಿಯನ್ನು 400 ಸ್ಥಾನ ಗೆಲ್ಲಿಸುವ ಮೂಲಕ ಮೋದಿಯವರಿಗೆ ನಾವು ಕೊಡುಗೆ ನೀಡಬೇಕು. ಭವ್ಯ ಭಾರತಕ್ಕಾಗಿ ನಿಮ್ಮ ಮತ ನೀಡುವ ಮೂಲಕ ಮತ್ತೊಮ್ಮೆ ಮೋದಿ ಬೆಂಬಲಿಸಿ ಎಂದರು.
ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…
ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…
ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…
ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…
ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…