ಮೈಸೂರು : ಇತ್ತೀಚೆಗೆ ನಗರದ ಎಸ್‌ಬಿಐ ಬ್ಯಾಂಕ್ ಗ್ರಾಹಕರ ಖಾತೆಯಲ್ಲಿನ ಹಣ ಕಡಿತವಾಗಿ ಗ್ರಾಹಕರು ಆತಂಕಕ್ಕೆ ಒಳಗಾಗಿದ್ದರು. ಸದ್ಯ ಖಾತೆಯಲ್ಲಿ ಹಣ ಕಡಿತದ ಬಗ್ಗೆ ಎಸ್‌ಬಿಐನ ಪ್ರಾದೇಶಿಕ ಅಧಿಕಾರಿ ಶ್ರೀಪಾದ ರಾಜು ಸ್ಪಷ್ಟನೆ ನೀಡಿದ್ದಾರೆ.
ಇಂತಹ ಪ್ರಕರಣಗಳಲ್ಲಿ ಪೊಲೀಸ್ ಹಾಗೂ ಸಂಬಂಧ ಪಟ್ಟ ಇಲಾಖೆ ಅವರು ಖಾತೆಯನ್ನು ಹೋಲ್ಡ್ ಮಾಡುವಂತೆ ಬ್ಯಾಂಕ್ ಗಳಿಗೆ ಮಾಹಿತಿ ನೀಡಿರುತ್ತಾರೆ. ಆ ಹಿನ್ನೆಲೆಯಲ್ಲಿ ಬ್ಯಾಂಕ್ ಖಾತೆ ಹೋಲ್ಡ್ ಆಗಿರುತ್ತದೆ. ಹಣ ಕಡಿತವಾಗುವುದಿಲ್ಲ. ಈ ಬಗ್ಗೆ ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಅವರು ಸ್ಷಷ್ಟಪಡಿಸಿದರು.
ಇದರ ಜೊತೆಗೆ ಒಂದಷ್ಟು ತಾಂತ್ರಿಕ ಸಮಸ್ಯೆಗಳಿಂದಲೂ ಸಮಸ್ಯೆ ಆಗಿರಬಹುದು. ಖಾತೆದಾರರಿಗೆ ಮಾಹಿತಿ ಕೊಡದೆ ಹಣ ಕಡಿತ ಮಾಡುವುದಿಲ್ಲ.
ಗ್ರಾಹಕರ ಹಣ ನಮ್ಮ ಬ್ಯಾಂಕ್ ಖಾತೆಯಲ್ಲಿ ಭದ್ರವಾಗಿರುತ್ತದೆ. ಖಾತೆಯಲ್ಲಿ ಏನಾದರೂ ಸಮಸ್ಯೆ ಬಂದಲ್ಲಿ ನೆರವಾಗಿ ಸ್ಥಳೀಯ ಬ್ರ್ಯಾಂಚ್ ಮತ್ತು ರೀಜನಲ್ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಹೇಳಿದರು.
ಈಗಾಗಲೇ ನಗರದ ಎಲ್ಲಾ ಬ್ರ್ಯಾಂಚ್ ಮ್ಯಾನೇಜರ್ ಮತ್ತು ಸಿಬ್ಬಂದಿಗಳಿಗೆ ಮಾಹಿತಿ ಕೊಟ್ಟಿದ್ದೇವೆ. ಗ್ರಾಹಕರು ಮಾಹಿತಿ ಪಡೆದು ಕೊಳ್ಳಬಹುದು ಭಯ ಪಡುವ ಅಗತ್ಯವಿಲ್ಲ. ಆದರೆ, ಗ್ರಾಹಕರು ಅಪರಿಚಿತ ವ್ಯಕ್ತಿಯ ಜೊತೆ ಬ್ಯಾಂಕ್ ವ್ಯವಹಾರ ಮಾಡಬಾರದು. ಇದರಿಂದ ವಂಚನೆಗೆ ಒಳಗಾಗುವ ಸಾಧ್ಯತೆ ಇರುತ್ತದೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…