ಮೈಸೂರು

ಬ್ಯಾಂಕಿನಲ್ಲಿ ಹಣ ಕಡಿತ : SBI ಪ್ರಾದೇಶಿಕ ಅಧಿಕಾರಿ ಹೇಳಿದ್ದೇನು ?

ಮೈಸೂರು : ಇತ್ತೀಚೆಗೆ ನಗರದ ಎಸ್‌ಬಿಐ ಬ್ಯಾಂಕ್‌ ಗ್ರಾಹಕರ ಖಾತೆಯಲ್ಲಿನ ಹಣ ಕಡಿತವಾಗಿ ಗ್ರಾಹಕರು ಆತಂಕಕ್ಕೆ ಒಳಗಾಗಿದ್ದರು. ಸದ್ಯ ಖಾತೆಯಲ್ಲಿ ಹಣ ಕಡಿತದ ಬಗ್ಗೆ ಎಸ್‌ಬಿಐನ ಪ್ರಾದೇಶಿಕ ಅಧಿಕಾರಿ  ಶ್ರೀಪಾದ ರಾಜು ಸ್ಪಷ್ಟನೆ ನೀಡಿದ್ದಾರೆ.

ಇಂತಹ ಪ್ರಕರಣಗಳಲ್ಲಿ ಪೊಲೀಸ್ ಹಾಗೂ ಸಂಬಂಧ ಪಟ್ಟ ಇಲಾಖೆ  ಅವರು ಖಾತೆಯನ್ನು ಹೋಲ್ಡ್‌  ಮಾಡುವಂತೆ ಬ್ಯಾಂಕ್ ಗಳಿಗೆ ಮಾಹಿತಿ ನೀಡಿರುತ್ತಾರೆ. ಆ ಹಿನ್ನೆಲೆಯಲ್ಲಿ ಬ್ಯಾಂಕ್ ಖಾತೆ ಹೋಲ್ಡ್ ಆಗಿರುತ್ತದೆ.  ಹಣ ಕಡಿತವಾಗುವುದಿಲ್ಲ. ಈ ಬಗ್ಗೆ ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಅವರು ಸ್ಷಷ್ಟಪಡಿಸಿದರು.

ಇದರ ಜೊತೆಗೆ ಒಂದಷ್ಟು ತಾಂತ್ರಿಕ ಸಮಸ್ಯೆಗಳಿಂದಲೂ ಸಮಸ್ಯೆ ಆಗಿರಬಹುದು. ಖಾತೆದಾರರಿಗೆ ಮಾಹಿತಿ ಕೊಡದೆ ಹಣ ಕಡಿತ ಮಾಡುವುದಿಲ್ಲ.
ಗ್ರಾಹಕರ ಹಣ ನಮ್ಮ ಬ್ಯಾಂಕ್  ಖಾತೆಯಲ್ಲಿ ಭದ್ರವಾಗಿರುತ್ತದೆ. ಖಾತೆಯಲ್ಲಿ ಏನಾದರೂ ಸಮಸ್ಯೆ ಬಂದಲ್ಲಿ ನೆರವಾಗಿ ಸ್ಥಳೀಯ ಬ್ರ್ಯಾಂಚ್ ಮತ್ತು ರೀಜನಲ್ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಹೇಳಿದರು.

ಈಗಾಗಲೇ ನಗರದ ಎಲ್ಲಾ ಬ್ರ್ಯಾಂಚ್ ಮ್ಯಾನೇಜರ್ ಮತ್ತು ಸಿಬ್ಬಂದಿಗಳಿಗೆ ಮಾಹಿತಿ ಕೊಟ್ಟಿದ್ದೇವೆ. ಗ್ರಾಹಕರು ಮಾಹಿತಿ ಪಡೆದು ಕೊಳ್ಳಬಹುದು ಭಯ ಪಡುವ ಅಗತ್ಯವಿಲ್ಲ.  ಆದರೆ, ಗ್ರಾಹಕರು ಅಪರಿಚಿತ ವ್ಯಕ್ತಿಯ ಜೊತೆ ಬ್ಯಾಂಕ್ ವ್ಯವಹಾರ ಮಾಡಬಾರದು.  ಇದರಿಂದ ವಂಚನೆಗೆ ಒಳಗಾಗುವ ಸಾಧ್ಯತೆ ಇರುತ್ತದೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

10 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

10 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

12 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

13 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

14 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

17 hours ago