ಮೈಸೂರು: ಕೋತಿಯೊಂದು ಪ್ರವಾಸಿಗರೊಬ್ಬರ ಪರ್ಸ್, ಮೊಬೈಲ್ ಫೋನ್ ಕಿತ್ತುಕೊಂಡು ಅರ್ಧಗಂಟೆಗೂ ಹೆಚ್ಚು ಕಾಲ ಸತಾಯಿಸಿದ ಘಟನೆ ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದೆ.
ನಾಡದೇವತೆ ಚಾಮುಂಡಿಯ ದರ್ಶನಕ್ಕೆ ಹಾಸನದಿಂದ ಬಂದಿದ್ದ ಪ್ರವಾಸಿಗರೊಬ್ಬರು ಬೆಟ್ಟದ ತಪ್ಪಲಿನ ಮೂಲಕ ನಾಡದೇವತೆ ದರ್ಶನಕ್ಕೆ ತೆರಳುತ್ತಿದ್ದರು. ಮೆಟ್ಟಿಲು ಮಾರ್ಗದ ಪಾದದ ಬಳಿ ಚಾಮುಂಡಿ ವಿಗ್ರಹಕ್ಕೆ ಪೂಜೆ ಸಲ್ಲಿಸುತ್ತಿದ್ದರು. ಈ ವೇಳೆ ಮಹಿಳೆಯ ಕೈಲಿದ್ದ ಪರ್ಸ್ ಕಸಿದ ಕೋತಿ ನೋಡ ನೋಡುತ್ತಿದ್ದಂತೆಯೇ ಮರವೇರಿತು.
ಪರ್ಸ್‌ನಲ್ಲಿದ್ದ ವಸ್ತುಗಳನ್ನು ಒಂದೊಂದಾಗಿ ಬಿಸಾಡಿದ ಕಪಿರಾಯ. ಕೊನೆಗೆ ಮೊಬೈಲ್ ನ್ನು ಕೈಗೆತ್ತಿಕೊಂಡು ಕೊಂಬೆಯಿಂದ ಕೊಂಬೆಗೆ ಹಾರುತ್ತಾ ಪ್ರವಾಸಿಗರನ್ನು ಪರದಾಡುವಂತೆ ಮಾಡಿದೆ. ಬಾಳೆಹಣ್ಣು ಆಮಿಷ ನೀಡಿದರೂ ಮೊಬೈಲ್ ಬಿಟ್ಟಿಲ್ಲ. ಸುಮಾರು ಅರ್ಧಗಂಟೆ ಕಾಲ ಚೇಷ್ಠೆ ಮುಂದುವರೆಸಿ ಕೊನೆಗೆ ಮೊಬೈಲ್ ಬಿಸಾಡಿದೆ. ಮೊಬೈಲ್ ಪಡೆದ ನಂತರ ಪ್ರವಾಸಿಗರು ನಾಡದೇವಿ ದರುಶನಕ್ಕೆ ತೆರಳಿದರು.
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್ನಲ್ಲಿ ಮೂಡಿಬಂದಿರುವ…