ಮೈಸೂರು

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಜೊತೆಗೆ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ ಭಾರತೀಯ ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗುವ ಸಾಧ್ಯತೆ ಇದೆ.

ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು. ಹಾಸನ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಇದಲ್ಲದೆ, ಮೈಸೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಬಿರುಗಾಳಿ ಹಾಗೂ ಮಳೆಯ ಹಿನ್ನೆಲೆ ಸಾರ್ವಜನಿಕರು ಅನಗತ್ಯವಾಗಿ ಹೊರಗಡೆ ಓಡಾಡುವುದನ್ನು ತಪ್ಪಿಸಬೇಕು. ಮರಗಳ ಕೆಳಗೆ ವಾಹನ ನಿಲ್ಲಿಸದಂತೆ ಹಾಗೂ ಗುಡುಗು-ಮಿಂಚು ಸಂದರ್ಭದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಸೂಚಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಅದರ ಜೊತೆಗೆ ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಸಮುದ್ರಕ್ಕೆ ತೆರಳುವ ಮೀನುಗಾರರು ಹಾಗೂ ಕಡಲ ತೀರ ಪ್ರದೇಶದ ನಿವಾಸಿಗಳು ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

3 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

4 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

5 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

10 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

17 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

17 hours ago