ಮೈಸೂರು: ಮೂಗೂರು ತ್ರಿಪುರ ಸುಂದರಿ ಅಮ್ಮನವರ ದೇವಾಲಯಕ್ಕೆ ಸಂಸದ ಸುನೀಲ್ ಬೋಸ್ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಟಿ.ನರಸೀಪುರಕ್ಕೆ ಭೇಟಿ ನೀಡಿದ ಸಂಸದ ಸುನೀಲ್ ಬೋಸ್‌ಗೆ ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು.
ಬಳಿಕ ತ್ರಿಪುರ ಸುಂದರಿ ಅಮ್ಮನವರ ದೇವಾಲಯಕ್ಕೆ ಭೇಟಿ ನೀಡಿದ ಸಂಸದರು, ವಿಶೇಷ ಪೂಜೆ ಸಲ್ಲಿಸಿ ತಾಯಿಯ ದರ್ಶನ ಪಡೆದರು.
ಈ ವೇಳೆ ಪ್ರತಿಕ್ರಿಯಿಸಿದ ಅವರು, ನರಸೀಪುರ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗಿದೆ. ಎಲ್ಲಾ ಕ್ಷೇತ್ರಗಳಲ್ಲೂ ಕ್ರೀಡಾಂಗಣ ಇದೆ. ಈ ಕ್ಷೇತ್ರದಲ್ಲಿ ಕ್ರೀಡಾಂಗಣ ಇಲ್ಲ. ಹೀಗಾಗಿ ಕ್ರೀಡಾಂಗಣ ನಿರ್ಮಾಣಕ್ಕೆ ಸ್ಥಳ ಗುರುತಿಸುವ ಕೆಲಸ ನಡೆಯುತ್ತಿದ್ದು, ಶೀಘ್ರದಲ್ಲೇ ನರಸೀಪುರ ತಾಲ್ಲೂಕಿನಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಆಗಲಿದೆ ಎಂದು ಭರವಸೆ ನೀಡಿದರು.