ಮೈಸೂರು

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ನಿರ್ದೇಶನ ನೀಡಿದರು.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಚಾಮುಂಡಿ ಬೆಟ್ಟದಲ್ಲಿ ಜನವರಿ 2 ರಂದು ಲಲಿತಾ ಸಹಸ್ರನಾಮ ಕಾರ್ಯಕ್ರಮ, ಜನವರಿ 3 ಹಾಗೂ 4 ರಂದು ವಾರಾಂತ್ಯವಿದ್ದು, ದರ್ಶನಕ್ಕೆ ಬರುವ ಭಕ್ತಾದಿಗಳ ನೂಕು ನುಗ್ಗಲು ಉಂಟಾಗದಂತೆ ಸರದಿ ಸಾಲುಗಳನ್ನು ಹೆಚ್ಚಿಗೆ ಮಾಡುವಂತೆ ತಿಳಿಸಿದರು.

ಸುಗಮ‌ ವಾಹನ ಸಂಚಾರಕ್ಕೆ ಹಾಗೂ‌ ವಾಹನ ನಿಲುಗಡೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಿ. ಹೆಚ್ಚಿನ ಜನದಟ್ಟಣೆ ಉಂಟಾದ ಸಂದರ್ಭದಲ್ಲಿ ಗಣ್ಯ ವ್ಯಕ್ತಿಗಳ ವಾಹನಗಳನ್ನು ಸಹ ಮಹಿಷಾಸುರ ಪ್ರತಿಮೆಯ ಬಳಿ ನಿಲ್ಲಿಸಿ ನಂತರ ಬ್ಯಾಟರಿ ಚಾಲಿತ ವಾಹನದ ವ್ಯವಸ್ಥೆ ಮಾಡುವುದು ಉತ್ತಮ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಕುಡಿಯುವ ನೀರಿನ ವ್ಯವಸ್ಥೆಗಳನ್ನು ಹೆಚ್ಚಿನ ಸ್ಥಳಗಳಲ್ಲಿ ಮಾಡಿ. ಸ್ವಚ್ಛತೆ ಕಪಾಡಲು ಹೆಚ್ಚಿನ ಸ್ವಚ್ಛತಾ ಸಿಬ್ಬಂದಿಗಳನ್ನು ನಿಯೋಜಿಸಿ. ಕೆ‌ಎಸ್ಆರ್ ಟಿಸಿ ನಗರ ವಿಭಾಗದಿಂದ ಹೆಚ್ಚಿನ ಬಸ್ ಟ್ರಿಪ್ ಗಳನ್ನು ಮಾಡುವಂತೆ ತಿಳಿಸಿದರು.

ಆರೋಗ್ಯ ಇಲಾಖೆ ವತಿಯಿಂದ ಎರಡು ಅಂಬ್ಯೂಲೆನ್ಸ್ ನ್ನು ನಿಯೋಜಿಸಬೇಕು ಹಾಗೂ ದಾನಿಗಳು ನೀಡುವ ಆಹಾರ ಪದಾರ್ಥಗಳಲ್ಲಿ ದಸೋಹ ಭವನದಲ್ಲಿ ಪ್ರಸಾದ ಸಿದ್ಧಪಡಿಸಿದರೂ ನೀಡಿರುವ ಆಹಾರ ಪದರ್ಥಗಳ ಗುಣಮಟ್ಟವನ್ನು ಪರಿಶೀಲಿಸಿ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್ ಕುಮಾರ್, ಚಾಮುಂಡಿ‌ ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿ ರೂಪ, ದೇವಸ್ಥಾನದ ಅರ್ಚಕರಾದ ಶಶಿಶೇಖರ್ ದೀಕ್ಷಿತ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪೌತಿ ಖಾತಾ ಅರ್ಜಿ ಶೀಘ್ರ ವಿಲೇವಾರಿ ಮಾಡಿ : ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…

7 hours ago

ಜಿ-ರಾಮ್‌ಜಿ ವಾಪಸ್‌ ಪಡೆಯಿರಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…

8 hours ago

ಹಣ ಅಕ್ರಮ ವರ್ಗಾವಣೆ ಪ್ರಕರಣ : ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಜಾಮೀನು

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌…

10 hours ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

10 hours ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

11 hours ago

ಬೈಕ್ ಸಮೇತ ಸಜೀವ ದಹನವಾದ ಯುವಕ ; ಕೊಲೆ ಶಂಕೆ

ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…

12 hours ago