Mysore
27
broken clouds

Social Media

ಸೋಮವಾರ, 23 ಫೆಬ್ರವರಿ 2026
Light
Dark

ಹುಣಸೂರು: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

driniking water

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.

ಗ್ರಾಮದಲ್ಲಿ ಜಲ ಜೀವನ್‌ ಮಿಷನ್‌ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದ್ದು, ಇದರಿಂದ ಮನೆಗಳಿಗೆ ನೀರು ಪೂರೈಸುತ್ತಿದ್ದ ಪೈಪ್‌ಗೆ ಹಾನಿಯಾಗಿದೆ. ಇನ್ನು ಒಡೆದ ಪೈಪ್‌ ಒಳಗೆ ಕಲುಷಿತ ನೀರು ಸೇರ್ಪಡೆಗೊಂಡಿದ್ದು, ಈ ನೀರನ್ನು ಸೇವಿಸಿದ ಗ್ರಾಮಸ್ಥರ ಪೈಕಿ 25ಕ್ಕೂ ಹೆಚ್ಚು ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ.

ಅಸ್ವಸ್ಥಗೊಂಡ ಗ್ರಾಮಸ್ಥರನ್ನು ತಾಲೂಕು ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅತ್ತ ಗ್ರಾಮಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:
error: Content is protected !!