ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.
ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದ್ದು, ಇದರಿಂದ ಮನೆಗಳಿಗೆ ನೀರು ಪೂರೈಸುತ್ತಿದ್ದ ಪೈಪ್‌ಗೆ ಹಾನಿಯಾಗಿದೆ. ಇನ್ನು ಒಡೆದ ಪೈಪ್ ಒಳಗೆ ಕಲುಷಿತ ನೀರು ಸೇರ್ಪಡೆಗೊಂಡಿದ್ದು, ಈ ನೀರನ್ನು ಸೇವಿಸಿದ ಗ್ರಾಮಸ್ಥರ ಪೈಕಿ 25ಕ್ಕೂ ಹೆಚ್ಚು ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ.
ಅಸ್ವಸ್ಥಗೊಂಡ ಗ್ರಾಮಸ್ಥರನ್ನು ತಾಲೂಕು ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅತ್ತ ಗ್ರಾಮಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಿ.ನರಸೀಪುರ : ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ಟಿ.ನರಸೀಪುರ ತಾಲ್ಲೂಕಿನ ಶ್ರೀರಂಗರಾಜಪುರ ಗ್ರಾಮದಲ್ಲಿ ನಡೆದಿದೆ. ಕಳೆದ…
ಮೈಸೂರು: ಎಂಎಲ್‌ಸಿ ಸ್ಥಾನಕ್ಕಾಗಿ ರಕ್ತದಲ್ಲಿ ಸಹಿ ಮಾಡಿ ಮನವಿ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತನೊಬ್ಬರು ತಮ್ಮ…
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…