Mysore
31
clear sky

Social Media

ಮಂಗಳವಾರ, 10 ಮಾರ್ಚ್ 2026
Light
Dark

ಪಿರಿಯಾಪಟ್ಟಣ: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿ ನಡೆದಿದೆ.

ಬೆಟ್ಟದಪುರದ ಮುಸ್ಲಿಂ ಬ್ಲಾಕ್‌ನಲ್ಲಿ ಈ ಘಟನೆ ನಡೆದಿದ್ದು, ಸಂಬ್ರಿನಾ ಎಂಬ ಮಹಿಳೆ ತನ್ನಿಬ್ಬರು ಮಕ್ಕಳ ಕತ್ತು ಕೊಯ್ದು, ಬಳಿಕ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಹಿಳೆ ಯಾತಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಬೆಟ್ಟದಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:
error: Content is protected !!