ಮೈಸೂರು: ಅತ್ಯಾಚಾರ ಪ್ರಕರಣದಲ್ಲಿ ದೇಶ ಬಿಟ್ಟು ಹೋಗಿ ಮತ್ತೊಂದು ಹೊಸ ದೇಶವನ್ನು ಕಟ್ಟಿಕೊಂಡಿರುವ ನಿತ್ಯಾನಂದಸ್ವಾಮಿ ಇರುವ ಜಾಗಕ್ಕೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸೇರಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.
ನಗರದಲ್ಲಿ ಶುಕ್ರವಾರ(ಮೇ.10) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿತ್ಯಾನಂದ ಪ್ರಕರಣ ಏನಾಯಿತು ಎಂದು ಎಲ್ಲರಿಗೂ ತಿಳಿದಿದೆ. ನನಗಿರುವ ಮಾಹಿತಿ ಪ್ರಕಾರ ಹಾಸನ ಸಂಸದ ಪ್ರಜ್ವಲ್ ನಿತ್ಯಾನಂದಸ್ವಾಮಿ ಬಳಿ ಸೇರಲು ಪ್ರಯತ್ನಿಸುತ್ತಿದ್ದಾರೆ. ಆದರೆ ಜೆಡಿಎಸ್ ರಾಜ್ಯದಲ್ಲಿ ಪ್ರೆಸ್‌ಮೀಟ್ ಮತ್ತು ಪ್ರತಿಭಟನೆಗಳನ್ನು ಮಾಡಿ ಜನರ ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದೆ ಎಂದು ನೇರವಾಗಿ ಆರೋಪ ಮಾಡಿದರು.
ಎರಡು ಬಾರಿ ಮುಖ್ಯಮಂತ್ರಿಯಾಗಿರುವ ಎಚ್.ಡಿ ಕುಮಾರಸ್ವಾಮಿಗೆ ಸಂತ್ರಸ್ತೆಯರ ಬಗ್ಗೆ ಕಾಳಜಿ ಇಲ್ಲ. ರಾಜ್ಯಪಾಲರಿಗೆ ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ಕೊಡುವಂತೆ ಮನವಿ ಮಾಡಿದ್ದೀರಾ? ಅಮಿತ್ ಶಾ ನಿಮಗೇನಾದರೂ ಪ್ರಕರಣ ಮುಚ್ಚಿ ಹಾಕುವ ಭರವಸೆ ನೀಡಿದ್ದಾರಾ ಎಂದು ಪ್ರಶ್ನಿಸಿದರು.
ಬೆಂಗಳೂರು : 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ. ಶಿಕ್ಷಣ ಸಚಿವ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ.…
ಬೆಂಗಳೂರು : 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶವನ್ನು ಬುಧವಾರ (ಏಪ್ರಿಲ್ 23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…
ಕೈಗಾರಿಕೆಗಳ ತ್ಯಾಜ್ಯ, ಒಳಚರಂಡಿ ನೀರು ಸೇರಿ ಸ್ನಾನಘಟ್ಟದ ನೀರು ಕಲ್ಮಶ, ಸ್ನಾನ ಮಾಡುವ ಭಕ್ತರಿಗೆ ರೋಗದ ಭೀತಿ ಎಸ್.ಎಸ್.ಭಟ್ ನಂಜನಗೂಡು…
ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ…
ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ…