ಮೈಸೂರು

ಸಂಸದ ಪ್ರತಾಪ್ ಸಿಂಹ ದೇಶದ್ರೋಹಿಯಂತೆ ಚಿತ್ರಿಸಿದ್ದ ಫ್ಲೆಕ್ಸ್: ಪೊಲೀಸರಿಂದ ತೆರವು

ಮೈಸೂರು: ನೂತನ ಪಾರ್ಲಿಮೆಂಟ್‌ನಲ್ಲಿನ ಸ್ಮೋಕ್‌ ಬಾಂಬ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಅಭಿಯಾನಗಳು ಹೆಚ್ಚುತ್ತಿವೆ. ಆರೋಪಿಗಳ ಬಳಿ ದೊರೆತ ಪಾಸ್‌ ಸಂಸದ ಪ್ರತಾಪ್‌ ಸಿಂಹರಿಂದ ಪಡೆದದ್ದು ಎಂದು ಸಾಭೀತಾದ ಹಿನ್ನಲೆ ಅವರ ಟೀಕೆಗಳು ಹೆಚ್ಚಾಗುತ್ತಿವೆ.

ಕಿಡಿಗೇಡಿಗಳಿಗೆ ವಿಸಿಟರ್ ಪಾಸ್‌ ನೀಡಿ ಸಂಸತ್ತಿನ ಭದ್ರತೆಯನ್ನು ಅಪಾಯಕ್ಕೊಡ್ಡಿದ್ದಾರೆ ಎಂದು ಮೈಸೂರಿನಲ್ಲಿ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಅವರ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ನೆನ್ನೆ (ಬುಧವಾರ), ಇಂದು ನಗರದಲ್ಲಿ ಪ್ರತಿಭಟನೆ ನಡೆಸಿ ಅವರನ್ನು ಸಂಸತ್ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿದ್ದರು.

ಇದರ ಬೆನ್ನಲ್ಲೇ ಇಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ನಗರದ ಮಹಾರಾಜ ಸರ್ಕಲ್ ನಲ್ಲಿ ಪ್ರತಾಪ್ ಸಿಂಹ ದೇಶದ್ರೋಹಿ ಅಂತ ನಮೂದಿಸಿರುವ ಫ್ಲೆಕ್ಸ್ ಹಾಕಿದೆ. ಫ್ಲೆಕ್ಸ್ ನಲ್ಲಿ ಸಂಸದರನ್ನು ಒಬ್ಬ ಭಯೋತ್ಪಾದಕನಂತೆ ತೋರಿಸಿ ತಾಲಿಬಾನ್ ಉಗ್ರರು ತಲೆಗೆ ಸುತ್ತುವ ಶಮ್ಲಾವನ್ನು ಪ್ರತಾಪ್ ತಲೆಗೆ ಸುತ್ತಿ ಕೈಗಳಲ್ಲಿ ಬಾಂಬ್ ಗಳನ್ನು ಚಿತ್ರಿಸಲಾಗಿದೆ. ಅವರನ್ನು ಸಂಸತ್ ಸ್ಥಾನದಿಂದ ವಜಾಗೊಳಿಸುವಂತೆ ಜಾಗೃತ ವೇದಿಕೆ ಸಹಿ ಅಭಿಯಾನ ಶುರುಮಾಡಿರುವುದನ್ನು ಫ್ಲೆಕ್ಸ್ ನಲ್ಲಿ ಬರೆಯಲಾಗಿದೆ.

ಪೊಲೀಸರು ಫ್ಲೆಕ್ಸ್ ಅನ್ನು ಮಹಾರಾಜ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಿದ ಬಳಿಕ ಪಾಲಿಕೆ ಸಿಬ್ಬಂದಿ ಅದನ್ನು ಅಲ್ಲಿಂದ ತೆಗೆದುಕೊಂಡು ಹೋಗಿದೆ. ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

andolanait

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

16 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

17 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

17 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

17 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

18 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

21 hours ago