Mysore
19
overcast clouds

Social Media

ಭಾನುವಾರ, 25 ಜನವರಿ 2026
Light
Dark

ರಾಜಕೀಯ ನಿವೃತ್ತಿ ಘೋಷಿಸಿದ ಶ್ರೀನಿವಾಸ್ ಪ್ರಸಾದ್

ಮೈಸೂರು: ದಲಿತ ನಾಯಕ ಮತ್ತು ಚಾಮರಾಜನಗರ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ವಿ.ಶ್ರೀನಿವಾಸ್ ಪ್ರಸಾದ್, ನನ್ನ ರಾಜಕೀಯ ಜೀವನಕ್ಕೆ 50 ವರ್ಷ ಆಗುತ್ತಿದೆ. ಇನ್ನು ಒಂದೂವರೆ ವರ್ಷಕ್ಕೆ ಸಂಸದ ಅವಧಿ ಮುಕ್ತಾಯವಾಗುತ್ತದೆ. ಅಲ್ಲಿಗೆ ನಾನು ನಿವೃತ್ತಿ ಆಗುತ್ತೇನೆ. 1977ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಗೆದ್ದೆ. ಇದುವರೆಗೆ 14 ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. 11 ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದೇನೆ. ಒಂದೂವರೆ ವರ್ಷ ಕಳೆದರೆ ನಾನು ರಾಜಕೀಯಕ್ಕೆ ಬಂದು 50 ವರ್ಷವಾಗಲಿದೆ. ಹಾಗಾಗಿ ರಾಜಕೀಯವಾಗಿ ನಿವೃತ್ತಿಯಾಗಲು ನಿರ್ಧರಿಸಿದ್ದೇನೆ ಎಂದರು.ಕಳೆದ ಲೋಕಸಭಾ ಚುನಾವಣೆಯಲ್ಲೇ ಸ್ಪರ್ಧಿಸುವ ಇಚ್ಚೆ ಇರಲಿಲ್ಲ. ಆದರೆ, ಕ್ಷೇತ್ರದ ಮತದಾರರು ಕಡೆಯ ಚುನಾವಣೆಯಲ್ಲಿ ಗೆದ್ದು ಅವಧಿ ಮುಗಿದ ಬಳಿಕ ನಿವೃತ್ತಿಯಾಗಿ ಎಂದಿದ್ದರು. ಹಾಗಾಗಿ ಚುನಾವಣೆಗೆ ಸ್ಪರ್ಧಿಸಿದೆ. ಈಗ ನನ್ನ ಆರೋಗ್ಯ ಸರಿಯಿಲ್ಲ, ನನಗೀಗ ಹೆಚ್ಚು ಸಮಯ ನಿಲ್ಲಲಾಗುವುದಿಲ್ಲ. ಹಾಗಾಗಿ ನನ್ನ ಸಂಸತ್ ಸ್ಥಾನದ ಅವಧಿ ಮುಗಿದ ನಂತರ ರಾಜಕೀಯ ನಿವೃತ್ತಿಯ ಘೋಷಣೆ ಮಾಡಿದ್ದೇನೆ. ನನ್ನ ರಾಜಕೀಯ ನಿವೃತ್ತಿ ಬಳಿಕ ನನ್ನ ಮಕ್ಕಳು ರಾಜಕಾರಣಕ್ಕೆ ಬರುವುದಿಲ್ಲ ಎಂದು ಹೇಳಿದರು.

ಇನ್ನು, ಕಾಂಗ್ರೆಸ್ ಪಕ್ಷಕ್ಕೆ ಗಜೇಂದ್ರ ಮೋಕ್ಷ ಸಿಕ್ಕಿದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಗಜೇಂದ್ರ ಮೋಕ್ಷ ಸಿಕ್ಕಂತಾಗಿದೆ. 22 ವರ್ಷಗಳ ಸುದೀರ್ಘ ಅವಧಿಯ ಬಳಿಕ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದೆ. ಈ ಮೂಲಕ ಕಾಂಗ್ರೆಸ್‌ಗೆ ಗಜೇಂದ್ರ ಮೋಕ್ಷ ಸಿಕ್ಕಂತಾಗಿದೆ. ಆನೆ ನೀರು ಕುಡಿಯಲು ಕೆರೆಯ ಬಳಿ ಹೋದಾಗ ಮೊಸಳೆ ಆನೆಯ ಕಾಲು ಹಿಡಿದುಕೊಳ್ಳುತ್ತದೆ. ಆಗ ವಿಷ್ಣು ಚಕ್ರವನ್ನು ಪ್ರಯೋಗಿಸಿದಾಗ ಮೊಸಳೆಯಿಂದ ಆನೆಗೆ ಮುಕ್ತಿ ಸಿಗುತ್ತದೆ. ಅದೇ ರೀತಿ ಈಗ ಕಾಂಗ್ರೆಸ್ ಪಕ್ಷದ ಪರಿಸ್ಥಿತಿಯೂ ಆಗಿದೆ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!