yaduveer (1)
ಮೈಸೂರು : ಬಾನು ಮುಷ್ತಾಕ್ ಕನ್ನಾಡಂಬೆ ಕುರಿತ ಹೇಳಿಕೆಗೆ ಮೊದಲು ಸ್ಪಷ್ಟನೆ ಕೊಡಲಿ. ಸ್ಪಷ್ಟೀಕರಣ ಕೊಡದಿದ್ದರೆ ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ನನ್ನ ವಿರೋಧ ಇದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಯು ಟರ್ನ್ ಒಡೆದಿದ್ದಾರೆ.
ಮೈಸೂರಿನ ಸುತ್ತೂರು ಮಠದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಅವರನ್ನ ಆಯ್ಕೆ ಮಾಡಿದಾಗ ನಾನು ಸ್ವಾಗತಿಸಿದ್ದೆ. ಅವರ ಹಳೇ ಭಾಷಣ ನಂತರ ನೋಡಿದ್ದೇನೆ.ಆ ಭಾಷಣಕ್ಕೆ ಸ್ಪಷ್ಟೀಕರಣ ಬೇಕು. ಸ್ಪಷ್ಟೀಕರಣ ಕೊಡಲಿ ಅಥವಾ ಹೇಳಿಕೆಯನ್ನ ವಾಪಸ್ ಪಡೆಯಲಿ. ಎರಡು ಮಾಡದಿದ್ದರೆ ನನ್ನ ವಿರೋಧ ಇದೆ.
ಪಾರ್ಟಿಯ ನಿರ್ಧಾರವೇ ನಮ್ಮ ನಿರ್ಧಾರ. ಪಾರ್ಟಿಗೆ ವಿರುದ್ಧ ನಿಲುವು ನನ್ನದಲ್ಲ ಎಂದಿದ್ದಾರೆ. ಭುವನೇಶ್ವರಿ ಕುರಿತ ಬಾನು ಮುಷ್ತಾಕ್ ಹೇಳಿಕೆಯಿಂದ ನಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ. ಅದನ್ನ ಮುಷ್ತಾಕ್ ಅರ್ಥ ಮಾಡಿಕೊಳ್ಳಬೇಕು. ಅವರ ಧರ್ಮರ ಆಚರಣೆ ಬಗ್ಗೆ ನಾನು ಮಾತನಾಡುವುದಿಲ್ಲ. ನಮ್ಮ ಧರ್ಮದಲ್ಲಂತು ಮೂರ್ತಿ ಪೂಜೆ ಶ್ರೇಷ್ಠ. ಅವರು ಚಾಮುಂಡಿ ಮಾತೇ ಗೌರವಿಸಿ ಬರಬೇಕು. ಭಕ್ತಿಯಿಂದ ದೇವರನ್ನ ಪೂಜಿಸಬೇಕು. ಇದಕ್ಕು ಮೊದಲು ತಮ್ಮ ಹೇಳೆಯ ಹೇಳಿಕೆಗೆ ಸ್ಪಷ್ಟೀಕರಣ ಕೊಡಬೇಕು ಎಂದಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…