ಬೆಂಗಳೂರು: ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಅವರು ಇಂದು(ಜೂ.22) ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.
ಭೇಟಿ ವೇಳೆ ಸಂಸದರು ಹಾಗೂ ಮುಖ್ಯಮಂತ್ರಿಗಳು ಉಭಯ ಕುಶಲೋಪರ ವಿಚಾರಿಸಿದರು.
ಈ ವೇಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ ಅವರು ಉಪಸ್ಥಿತರಿದ್ದರು.
ಡಿಕೆ ಶಿವಕುಮಾರ ಭೇಟಿ
ಬಳಿಕ ಡಿಸಿಎಂ ಡಿಕೆ ಶಿವಕುಮಾರ ಅವರನ್ನು ಸಹ ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿದರು.