Mysore
16
broken clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಯದುವೀರ್‌ ಪ್ರತಿಕ್ರಿಯೆ

ಮೈಸೂರು: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದು ನಮ್ಮ ಪಕ್ಷಕ್ಕೆ ಸಂತಸ ತಂದಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.

ನಗರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸುಮಾರು 27 ವರ್ಷಗಳ ಬಳಿಕ ದೆಹಲಿಯಲ್ಲಿ ನಮ್ಮ ಪಕ್ಷ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದು ಸಂತೋಷವಾಗಿದೆ. ದೆಹಲಿಯ ಜನತೆ ಪ್ರಧಾನಿ ಮೋದಿಯವರ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ ನಮ್ಮ ಪಕ್ಷದ ನಾಯಕರಿಗೆ ಮತಗಳನ್ನು ನೀಡಿದ್ದಾರೆ. ಇದರಿಂದ ದೆಹಲಿಯಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಬರಲಿದೆ ಎಂದರು.

ದೆಹಲಿಯಲ್ಲಿ ಇಂದು ಕಮಲ ಅರಳಿರುವುದಕ್ಕೆ ಕಾರಣವಾಗಿರುವ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಸದಸ್ಯರು ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಲು ಇಚ್ಛಿಸುತ್ತೇನೆ. ಇನ್ನೂ ದೇಶದ ಮಹಾರಾಷ್ಟ್ರ, ಹರಿಯಾಣ ಮತ್ತು ಜಮ್ಮು ಕಾಶ್ಮೀರದ ಚುನಾವಣೆಗಳಲ್ಲಿಯೂ ಸಹ ಒಂದು ರೀತಿ ಸಕಾರಾತ್ಮಕವಾದ ಪ್ರತಿಕ್ರಿಯೆ ನೀಡಿದ್ದಾರೆ. ಹೀಗಾಗಿ ದೇಶದ ಜನತೆ ಪ್ರಧಾನಿ ಮೋದಿ ಅವರ ಜನಾಭಿವೃದ್ಧಿ ಕಾರ್ಯಗಳನ್ನು ಮೆಚ್ಚಿದ್ದಾರೆ ಎಂದು ಹೇಳಿದರು.

Tags:
error: Content is protected !!