ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರು ಪಕ್ಷದಲ್ಲಿ ಕಾರ್ಯಗಳನ್ನು ನಿಭಾಯಿಸಿದ್ದಾರೆ ಎಂದು ಅವರ ಪರ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬೀಸಿದ್ದಾರೆ.
ಮೈಸೂರಿನಲ್ಲಿ ಇಂದು(ಜನವರಿ.31) ಬಿಜೆಪಿ ರಾಜ್ಯಾಧ್ಯಾಕ್ಷರ ಬದಲಾವಣೆ ವಿಚಾರದ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಣ ರಾಜಕೀಯದಿಂದಾಗಿ ಪಕ್ಷಕ್ಕೆ ಹಿನ್ನೆಡೆಯಾಗುತ್ತಿದೆ. ಆದರೆ ವಿಜಯೇಂದ್ರರವರು ರಾಜ್ಯಾಧ್ಯಕ್ಷರಾಗಿ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲೂ ಸಹ ಪಕ್ಷವನ್ನು ಗೆಲ್ಲಿಸಿದ್ದಾರೆ. ಅಲ್ಲದೇ ಅವರನ್ನೇ ಪಕ್ಷದ ಕೆಲ ನಾಯಕರು ವಿರೋಧಿಸುತ್ತಿದ್ದಾರೆ. ಈ ಎಲ್ಲವನ್ನೂ ಹೈಕಮಾಂಡ್ ಗಮನಿಸುತ್ತಿದ್ದು, ಮುಂದಿನ ದಿನಗಳಲ್ಲಿ ವರಿಷ್ಠರು ಸರಿ ಮಾಡುವ ಭರವಸೆ ಇದೆ ಎಂದು ಹೇಳಿದರು.
ಇದೇ ವೇಳೆ ಬೆಂಗಳೂರು ಅರಮನೆ ಆಸ್ತಿ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ವಿಚಾರದ ಬಗ್ಗೆ ಮಾತನಾಡಿದ ಅವರು, ಈ ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿದೆ. ಆದರೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಆಸ್ತಿ ನಿಯಂತ್ರಣಕ್ಕೆ ಮುಂದಾಗಿದೆ. ಹೀಗಾಗಿ ನಾವು ಕಾನೂನು ಮೂಲಕವೇ ಹೋರಾಟ ಮಾಡುತ್ತೇವೆ ಎಂದರು.
ಇನ್ನೂ ಮಹಾರಾಣಿ ಕಾಲೇಜು ಕುಸಿತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ನಾವು ಮೊದಲಿನಿಂದಲೂ ನಾವು ಪಾರಂಪರಿಕ ಕಟ್ಟಡ ಸಂರಕ್ಷಣೆ ಮಾಡಿ ಎಂದು ಸರ್ಕಾರಕ್ಕೆ ಹೇಳಿದ್ದೇವು. ಈ ಕಾಲೇಜು ಕಟ್ಟಡವನ್ನು 15 ವರ್ಷಗಳ ಹಿಂದೆಯೇ ದುರಸ್ತಿ ಕಾರ್ಯ ಮಾಡಿದ್ದರೆ ಈ ರೀತಿ ಆಗುತ್ತಿರಲಿಲ್ಲ. ಆದರೆ ಇದೀಗ ಕಟ್ಟಡ ಕುಸಿದಾಗ ಒಡೆಯುವ ತೀರ್ಮಾನ ಒಳ್ಳೆಯದಲ್ಲ. ಅಲ್ಲದೇ ಈಗಾಗಲೇ ಲ್ಯಾಂಡ್ ಸ್ಟೋನ್ ಬಿಲ್ಡಿಂಗ್, ದೇವರಾಜ ಮಾರುಕಟ್ಟೆ ಎಲ್ಲವನ್ನೂ ದುರಸ್ತಿ ಮಾಡಿ ರಿನೋವೇಶನ್ ಮಾಡಬೇಕಿದೆ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅವು ಕೂಡ ಕುಸಿಯುತ್ತವೆ. ಸರ್ಕಾರ ಇನ್ನಾದರೂ ಪಾರಂಪರಿಕ ಕಟ್ಟಡಗಳ ರಕ್ಷಣೆಗೆ ಮುಂದಾಗಲಿ ಎಂದು ತಿಳಿಸಿದರು.
ಬನ್ನಿಮಂಟಪದ ಎಲ್‌ಐಸಿ ವೃತ್ತಕ್ಕೆ ಅರ್ಜುನನ ಹೆಸರು
ಬನ್ನಿಮಂಟಪದ ಎಲ್‌ಐಸಿ ವೃತ್ತಕ್ಕೆ ಅರ್ಜುನನ ಹೆಸರಿಡುವಂತೆ ಮೈಸೂರು ಮಹಾನಗರ ಪಾಲಿಕೆಗೆ ಪತ್ರ ಬರೆದಿದ್ದೇನೆ. ಜೊತೆಗೆ ಆ ಸ್ಥಳದಲ್ಲಿ ಅರ್ಜುನನ ಪ್ರತಿಮೆಯನ್ನು ಪ್ರತಿಷ್ಠಾಪಿಸಬೇಕು ಅನ್ನೋದೇ ನಮ್ಮ ಆಸೆಯಾಗಿದೆ. ಹೀಗಾಗಿ ಪಾಲಿಕೆ ಮುಂದಿನ ದಿನಗಳಲ್ಲಿ ಆ ಎಲ್ಲಾ ಕೆಲಸಗಳನ್ನು ಮಾಡಬೇಕು ಎಂದು ಹೇಳಿದರು.
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತನಿಗೂ ನೋಟಿಸ್ ನೀಡಲಾಗಿದೆ. ಮಂಗಳೂರಿನ ಕಾಂಗ್ರೆಸ್ ಮುಖಂಡ ಇನಾಯತ್ ಅಲಿ ಅವರಿಗೆ…
ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಇರುವುದರಿಂದ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಸಮಸ್ಯೆ ಬೆನ್ನಲ್ಲೇ ಇತರ ವಿಮಾನಗಳ…
ಬೆಂಗಳೂರು: 2026ರ ಐಪಿಎಲ್‌ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್‌ಸಿಎ ಚುನಾವಣೆ ಮತದಾನದ ವೇಳೆ…
ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…
ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…
ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…