ಮೈಸೂರು: ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾದ ವಿನಯ್ ಅವರು ಕಾಂಗ್ರೆಸ್‌ನವರ ಕ್ಷುಲಕ ರಾಜಕಾರಣಕ್ಕೆ ಬೇಸತ್ತು ಇಂದು ಇಹಲೋಕ ತ್ಯಜಿಸಿರುವ ಸುದ್ದಿ ತಿಳಿದು ಮನಸಿಗೆ ನೋವುಂಟಾಗಿದೆ ಅವರ ಆತ್ಮಹತ್ಯೆ ಪ್ರಕರಣಕ್ಕೆ ನ್ಯಾಯ ದೊರಕಬೇಕು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕೊಡಗು ಬಿಜೆಪಿ ಸೆಲ್ನ ಸಾಮಾಜಿಕ ಮಾಧ್ಯಮ ವ್ಯವಸ್ಥಾಪಕ ವಿನಯ್ ಅವರ ದುರಂತ ನಿಧನದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಮೃತರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ವಿನಯ್ ಅವರ ಡೇತ್ ನೋಟ್ ಪ್ರಕಾರ, ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದ ಕೆಲವು ವ್ಯಕ್ತಿಗಳಿಂದ ನಿರಂತರ ಕಿರುಕುಳ ಮತ್ತು ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದ್ದರಿಂದ ಅವರು ಅಪಾರ ಮಾನಸಿಕ ಒತ್ತಡದಲ್ಲಿದ್ದರು ಎಂಬುದು ಸ್ಪಷ್ಟವಾಗಿದೆ. ಸಣ್ಣಪುಟ್ಟ ವಿಷಯಗಳಿಗೆ ಪದೇ ಪದೇ ಎಫ್ಐಆರ್ಗಳು ದಾಖಲಾಗುವುದರಿಂದ ಕೊಡಗಿನ ಅಭಿವೃದ್ಧಿಗಾಗಿ ಸಮರ್ಪಿತವಾಗಿರುವ ಯುವ ಕಾರ್ಯಕರ್ತನ ಮೇಲೆ ಅಸಹನೀಯ ಒತ್ತಡ ಉಂಟಾಗಿದೆ. ರಾಜಕೀಯ ಸೇಡಿನ ಈ ಕೃತ್ಯವು ಅತ್ಯಂತ ಖಂಡನೀಯವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ವಿನಯ್‌ಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಲು ನಾವು ಎಲ್ಲಾ ಕಾನೂನು ಮಾರ್ಗಗಳನ್ನು ಅನುಸರಿಸುತ್ತೇವೆ. ಈ ದುಃಖದ ಸಂದರ್ಭದಲ್ಲಿ ನನ್ನ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಕೊಡಗಿನ ಜನರ ಸೇವೆಯಲ್ಲಿ ಅವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಂತ ವಿನಯ್ ಅವರ ಕುಟುಂಬ, ಸ್ನೇಹಿತರು ಮತ್ತು ಎಲ್ಲಾ ಸಹ ಕಾರ್ಯಕರ್ತರ ಜೊತೆ ಸದಾ ನಿಲ್ಲುತೇನೆ ಎಂದು ಭರವಸೆ ನೀಡಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…