Mysore
17
broken clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ನಮೋ ಭಾರತ್‌ ರೈಲು ಸಂಚಾರ: ಕೇಂದ್ರ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ ಸಂಸದ ಯದುವೀರ್‌

ಮೈಸೂರು: ದೇಶದ ಪ್ರಮುಖ ನಗರಗಳ ನಡುವೆ 50 ನಮೋ ಭಾರತ್‌ ರೈಲುಗಳ ಸಂಚಾರಕ್ಕೆ ಸೌಲಭ್ಯ ಕಲ್ಪಿಸಿದ್ದು, ಕರ್ನಾಟಕ ರಾಜ್ಯಕ್ಕೂ 2 ರೈಲುಗಳನ್ನು ಕೊಡುಗೆ ನೀಡಿದ್ದಾರೆ. ಈ ಕಾರಣಕ್ಕೆ ಕನ್ನಡಿಗರ ಪರವಾಗಿ ಕೇಂದ್ರ ಸರ್ಕಾರಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಧನ್ಯವಾದ ಅರ್ಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ನಮ್ಮ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಪ್ರಮುಖ ನಗರಗಳ ನಡುವೆ 50 ನಮೋ ಭಾರತ್ ರೈಲುಗಳು ಸಂಚಾರ ಸೌಲಭ್ಯ ಕಲ್ಪಿಸಿದ್ದಾರೆ. ಇದರಲ್ಲಿ ನಮ್ಮ ಕರ್ನಾಟಕಕ್ಕೂ 2 ರೈಲುಗಳ ಕೊಡುಗೆ ನೀಡಿದ್ದಾರೆ. ಈ ಎರಡು 2 ನಮೋ ಭಾರತ್ ರೈಲುಗಳು ಬೆಂಗಳೂರು-ಮೈಸೂರು ಮತ್ತು ಹುಬ್ಬಳ್ಳಿ-ದಾವಣಗೆರೆ ನಡುವೆ ಪ್ರಸಕ್ತ ವರ್ಷದಿಂದಲೇ ಸಂಚರಿಸಲಿವೆ ಎಂದು ಹೇಳಿದ್ದಾರೆ.

ಇನ್ನೂ ಕರ್ನಾಟಕಕ್ಕೆ ಈ ರೈಲು ಸೌಲಭ್ಯ ನೀಡಿದ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಜಿ ಮತ್ತು ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಕನ್ನಡಿಗರ ಪರವಾಗಿ ತುಂಬು ಹೃದಯದ ಧನ್ಯವಾದ ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.

Tags:
error: Content is protected !!