ಮೈಸೂರು: ದೇಶದ ಪ್ರಮುಖ ನಗರಗಳ ನಡುವೆ 50 ನಮೋ ಭಾರತ್ ರೈಲುಗಳ ಸಂಚಾರಕ್ಕೆ ಸೌಲಭ್ಯ ಕಲ್ಪಿಸಿದ್ದು, ಕರ್ನಾಟಕ ರಾಜ್ಯಕ್ಕೂ 2 ರೈಲುಗಳನ್ನು ಕೊಡುಗೆ ನೀಡಿದ್ದಾರೆ. ಈ ಕಾರಣಕ್ಕೆ ಕನ್ನಡಿಗರ ಪರವಾಗಿ ಕೇಂದ್ರ ಸರ್ಕಾರಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಧನ್ಯವಾದ ಅರ್ಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನಮ್ಮ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಪ್ರಮುಖ ನಗರಗಳ ನಡುವೆ 50 ನಮೋ ಭಾರತ್ ರೈಲುಗಳು ಸಂಚಾರ ಸೌಲಭ್ಯ ಕಲ್ಪಿಸಿದ್ದಾರೆ. ಇದರಲ್ಲಿ ನಮ್ಮ ಕರ್ನಾಟಕಕ್ಕೂ 2 ರೈಲುಗಳ ಕೊಡುಗೆ ನೀಡಿದ್ದಾರೆ. ಈ ಎರಡು 2 ನಮೋ ಭಾರತ್ ರೈಲುಗಳು ಬೆಂಗಳೂರು-ಮೈಸೂರು ಮತ್ತು ಹುಬ್ಬಳ್ಳಿ-ದಾವಣಗೆರೆ ನಡುವೆ ಪ್ರಸಕ್ತ ವರ್ಷದಿಂದಲೇ ಸಂಚರಿಸಲಿವೆ ಎಂದು ಹೇಳಿದ್ದಾರೆ.
ಇನ್ನೂ ಕರ್ನಾಟಕಕ್ಕೆ ಈ ರೈಲು ಸೌಲಭ್ಯ ನೀಡಿದ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಜಿ ಮತ್ತು ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಕನ್ನಡಿಗರ ಪರವಾಗಿ ತುಂಬು ಹೃದಯದ ಧನ್ಯವಾದ ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.
ಶ್ರೇಯಸ್ ದೇವನೂರು ಭಾರತದ ಅರಣ್ಯಗಳು ಕೇವಲ ಮರಗಳ ಗುಂಪಲ್ಲ; ಅವು ಜೀವವೈವಿಧ್ಯದ ಅದ್ಭುತ ಭಂಡಾರ. ಅಲ್ಲಿ ಪ್ರತಿಯೊಂದು ಕ್ಷಣವೂ ಅನಿರೀಕ್ಷಿತ,…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ವಲಯದ ಕೆಲವೆಡೆ ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ಕೆಲವು ಸಿಬ್ಬಂದಿ ಗಾಯಗೊಂಡಿದ್ದರು.…
ರೈತರು, ಕಾಡುಪ್ರಾಣಿಗಳಿಗೆ ನೀರಿನ ತೊಂದರೆ ; ಶೀಘ್ರದಲ್ಲಿ ಹೂಳು ತೆಗೆಸಲು ಆಗ್ರಹ ಹನೂರು : ಉಡುತೊರೆ ಹಳ್ಳ ಜಲಾಶಯ ನಿರ್ಮಾಣವಾದ…
ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು…
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…