ಮೈಸೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಮಾರ್ಚ್.20ರವರೆಗೂ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶುಭ ಹಾರೈಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಶೈಕ್ಷಣಿಕ ಜೀವನದ ಅತ್ಯಮೂಲ್ಯ ಘಟ್ಟವಾದ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಗೆ ಕ್ಷಣಗಣನೆ ಶುರುವಾಗಿದೆ. ಸುಂದರ ಭವಿಷ್ಯದ ಕನಸನ್ನು ನನಸಾಗಿಸಲು ಒಳ್ಳೆಯ ಅಂಕಗಳಿಸಬೇಕೆಂಬ ದೃಷ್ಟಿಯಿಂದ ಶ್ರದ್ಧೆ ಮತ್ತು ನಿಷ್ಠೆಯಿಂದ ಓದಿ, ನಾಳೆ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ತುಂಬು ಹೃದಯದಿಂದ ಶುಭ ಹಾರೈಸುತ್ತೇನೆ ಎಂದು ಹೇಳಿದ್ದಾರೆ.
ಯಾವುದೇ ರೀತಿಯ ಆತಂಕˌ ಅನುಮಾನಗಳಿಲ್ಲದೆ ತಪ್ಪದೆ ಪರೀಕ್ಷೆಗೆ ಹಾಜರಾಗಿˌ ಮುಕ್ತ ವಾತಾವರಣದಲ್ಲಿ ಪರೀಕ್ಷೆಯನ್ನು ಬರೆಯುವ ಮೂಲಕ ಒಳ್ಳೆಯ ಅಂಕ ಪಡೆದು ನಿಮ್ಮ ತಂದೆ-ತಾಯಿˌ ಗುರುಗಳುˌ ಶಾಲೆ-ಕಾಲೇಜುಗಳು ಹಾಗೂ ಊರಿಗೆ ಕೀರ್ತಿ ತರುವಂತಹ ಪ್ರಯತ್ನ ಮಾಡಿ. ನಿಮ್ಮೆಲ್ಲರ ಅಗಣಿತ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿ, ನಿಮ್ಮ ಭವಿಷ್ಯ ಉಜ್ವಲವಾಗಲಿ. ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ತಾಯಿ ಚಾಮುಂಡೇಶ್ವರಿ ಸನ್ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶುಭ ಕೋರಿದ್ದಾರೆ.
ಕೇಪ್ ಕೆನವೆರೆಲ್: ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳ ಕಾಲ ಸುದೀರ್ಘ ಕಾಲದ ಅನುಭವ ಹೊಂದಿರುವ ಸುನಿತಾ ವಿಲಿಯಮ್ಸ್ ನಿವೃತ್ತರಾಗಿದ್ದಾರೆ.…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ…
ಮಹಾದೇಶ್ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…