ಮೈಸೂರು

ಕೊಡವ ಸಮುದಾಯದ ಪರ ನಿಂತ ಸಂಸದ ಯದುವೀರ್‌ ಒಡೆಯರ್‌

ಮೈಸೂರು: ಕಟ್ಟೆಮಾಡು ದೇವಾಲಯದ ವಿಚಾರಕ್ಕೆ ಸಂಬಂಧಿಸಿದಂತೆ ಕೊಡಗಿನಲ್ಲಿ ಕೊಡವ ಸಮುದಾಯದ ಸದಸ್ಯರನ್ನು ಪೊಲೀಸರು ಬಂಧಿಸಿರುವುದಕ್ಕೆ ತೀವ್ರ ವಿರೋಧಿಸುತ್ತೇನೆ ಎಂದು ಹೇಳುವ ಮೂಲಕ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಕೊಡವ ಸಮುದಾಯದ ಪರ ನಿಂತಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕೊಡವ ಸಮುದಾಯದ ಸದಸ್ಯರನ್ನು ಪೋಲಿಸರು ಬಂಧಿಸಿರುವುದರ ಕುರಿತು ತೀವ್ರವಾಗಿ ವಿರೋಧಿಸುತ್ತೇನೆ. ಕೊಡಗು ಜಿಲ್ಲಾಡಳಿತ ಈ ರೀತಿಯ ವಿವಾದಗಳನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಬಗೆಹರಿಸಬೇಕು. ಎರಡೂ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಟ್ಟೆಮಾಡು ದೇವಾಲಯದ ವಿಚಾರಕ್ಕೆ ಸಂಬಂಧಿಸಿದಂತೆ ಕೊಡಗಿನಲ್ಲಿ ಇಂದು ಬೆಳಿಗ್ಗೆ ಕೊಡವ ಸಮುದಾಯದ ಸದಸ್ಯರನ್ನು ಪೋಲಿಸರು ಬಂಧಿಸಿರುವುದು ಖಂಡನೀಯ, ಕೊಡಗಿನಲ್ಲಿ ಯಾವ ರೀತಿಯ ಆಡಳಿತ ನಡೆಯುತ್ತಿದೆ. ಕೊಡಗಿನ ಕೆಲವು ಕಡೆ ರಸ್ತೆ ತಡೆ ಮತ್ತು ಬಂದ್ ಆಗಿರುವುದು ಕಂಡು ಬಂದಿದೆ. ಇದಕ್ಕೆ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣ. ಕೊಡಗಿನಲ್ಲಿ ಜಿಲ್ಲಾಡಳಿತ ಶಾಂತಿ ನೆಲೆಸುವ ಪ್ರಯತ್ನ ಮಾಡಬೇಕೇ ಹೊರತು ಶಾಂತಿ ಕದಡುವ ಪ್ರಯತ್ನ ಆಗಬಾರದು ಎಂದು ವಾಗ್ದಾಳಿ ನಡೆಸಿದ್ದಾರೆ.

ಶಾಂತಿಪ್ರಿಯರ ನಾಡಾದ ಕೊಡಗು ಜಿಲ್ಲೆಯಲ್ಲಿ ಎರಡು ಕಡೆಯವರನ್ನು ಕೂರಿಸಿ ಸಂಧಾನ ನಡೆಸುವ ಮೂಲಕ ಜಿಲ್ಲಾಡಳಿತ ಈ ವಿವಾದಗಳನ್ನು ಮುಗಿಸುವ ಪ್ರಯತ್ನ ಮಾಡಬೇಕು ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

9 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

9 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

10 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

10 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

10 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

10 hours ago