ಮೈಸೂರು

ಅರ್ಜುನ ಆನೆ ಸ್ಮಾರಕ: ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಂಸದ ಯದುವೀರ್

ಮೈಸೂರು : ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್ ಅವರಿಗೆ ಮೈಸೂರು ಪ್ರವಾಸೋದ್ಯಮ ಕುರಿತಂತೆ ಎರಡು ಪ್ರಸ್ತಾವನೆಗಳನ್ನು ಸಲ್ಲಿಸಿದ್ದಾರೆ.

ಬುಧವಾರ ನವದೆಹಲಿಯ ಅವರ ಕಚೇರಿಯಲ್ಲಿ ಭೇಟಿಯಾದ ಸಂಸದರು, ದಸರಾ ಆನೆ ಅರ್ಜುನ ಹೆಸರಿನ ಸ್ಮಾರಕ ಹಾಗೂ ಯೋಗ ವಸ್ತುಸಂಗ್ರಹಾಲಯ ಸಂಬಂಧ ಪ್ರಸ್ತಾವನೆ ಸಲ್ಲಿಸಿದ್ದಾರೆ.

2012 ರಿಂದ 2019 ರವರೆಗೆ ಚಿನ್ನದ ಅಂಬಾರಿಯನ್ನು ಹೊತ್ತು ಮೈಸೂರು ದಸರಾ ಮೆರವಣಿಗೆಯನ್ನು ಮುನ್ನಡೆಸಿದ ದಸರಾ ಆನೆ “ಅರ್ಜುನ” ಗೆ ಗೌರವ ಸಲ್ಲಿಸುವ ದೃಷ್ಠಿಯಿಂದ ಬನ್ನಿಮಂಟಪದ ಎಲ್ಐಸಿ ವೃತ್ತದ ಬಳಿ ದಸರಾ ಆನೆ ಅರ್ಜುನ ಸ್ಮಾರಕ, ಭವ್ಯ ಪ್ರತಿಮೆ, ಮೈಸೂರಿನ ದಸರಾ ಆನೆಗಳೊಂದಿಗಿನ ಬಾಂಧವ್ಯವನ್ನು ವಿವರಿಸುವ ಐತಿಹಾಸಿಕ ಫಲಕಗಳು, ಸೌರ ಬೆಳಕು, ಮಳೆನೀರು ಕೊಯ್ಲು ಮತ್ತು ಭೂದೃಶ್ಯ ಉದ್ಯಾನಗಳಂತಹ ಪರಿಸರ ಸ್ನೇಹಿ ವೈಶಿಷ್ಟ್ಯಗಳನ್ನು ಅನಾವರಣಗೊಳಿಸಲು ಮನವಿ ಮಾಡಿದ್ದಾರೆ.

ಮೈಸೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು ಯೋಗ ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸಲು ಉದ್ದೇಶಿಸಲಾಗಿದ್ದು, ಇದು ಯೋಗ ಕ್ಷೇತ್ರದಲ್ಲಿ ಮೈಸೂರಿನ ಜಾಗತಿಕ ಕೊಡುಗೆಗಳನ್ನು ಗುರುತಿಸುದಂತಾಗುತ್ತದೆ. ಈ ಮೂಲಕ ಶ್ರೀ ಕೃಷ್ಣಮಾಚಾರ್ಯ, ಪಟ್ಟಾಭಿ ಜೋಯಿಸ್ ಮತ್ತು ಬಿ.ಕೆ.ಎಸ್. ಅಯ್ಯಂಗಾರ್ ಅವರಂತಹ ಯೋಗಗುರುಗಳ ದಂತಕಥೆಗಳ ಕೊಡುಗೆಗಳನ್ನು ಒಳಗೊಂಡಂತೆ ಯೋಗದ ಇತಿಹಾಸ ಮತ್ತು ಮಹತ್ವವನ್ನು ಸಾರ ಬಹುದಾಗಿದೆ.

ಈ ಎರಡು ಪ್ರಸ್ತಾವನೆಗಳು ₹ 20 ಕೋಟಿ ವೆಚ್ಚದವಗಿದ್ದು, ಈ ಯೋಜನೆಗಳು, ಸಾಂಸ್ಕೃತಿಕ, ಐತಿಹಾಸಿಕ ಮತ್ತು ಪ್ರವಾಸಿ ಕೇಂದ್ರವಾಗಿ ಮೈಸೂರಿನ ಗುರುತನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ ಎಂದು ಸಂಸದ ಯದುವೀರ್‌ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

2 mins ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

1 hour ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

2 hours ago

ದಳಪತಿ ವಿಜಯ್‌ಗೆ ಮುಖ್ಯಮಂತ್ರಿ ಸ್ಥಾನದ ಆಫರ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…

3 hours ago

ನ್ಯಾಟೋ ದೇಶಗಳಿಗೆ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…

3 hours ago

ಪ್ರಜ್ವಲ್‌ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣ ; 39 ಆರೋಪಿಗಳ ವಿರುದ್ಧ ಚಾರ್ಚ್‌ಶೀಟ್‌

ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ…

3 hours ago