ಮೈಸೂರು : ಮೈಸೂರು-ಕೊಡಗು ಲೋಕಸಭಾ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮೈಸೂರು ಪ್ರವಾಸೋದ್ಯಮ ಕುರಿತಂತೆ ಎರಡು ಪ್ರಸ್ತಾವನೆಗಳನ್ನು ಸಲ್ಲಿಸಿದ್ದಾರೆ.
ಬುಧವಾರ ನವದೆಹಲಿಯ ಅವರ ಕಚೇರಿಯಲ್ಲಿ ಭೇಟಿಯಾದ ಸಂಸದರು, ದಸರಾ ಆನೆ ಅರ್ಜುನ ಹೆಸರಿನ ಸ್ಮಾರಕ ಹಾಗೂ ಯೋಗ ವಸ್ತುಸಂಗ್ರಹಾಲಯ ಸಂಬಂಧ ಪ್ರಸ್ತಾವನೆ ಸಲ್ಲಿಸಿದ್ದಾರೆ.
2012 ರಿಂದ 2019 ರವರೆಗೆ ಚಿನ್ನದ ಅಂಬಾರಿಯನ್ನು ಹೊತ್ತು ಮೈಸೂರು ದಸರಾ ಮೆರವಣಿಗೆಯನ್ನು ಮುನ್ನಡೆಸಿದ ದಸರಾ ಆನೆ “ಅರ್ಜುನ” ಗೆ ಗೌರವ ಸಲ್ಲಿಸುವ ದೃಷ್ಠಿಯಿಂದ ಬನ್ನಿಮಂಟಪದ ಎಲ್ಐಸಿ ವೃತ್ತದ ಬಳಿ ದಸರಾ ಆನೆ ಅರ್ಜುನ ಸ್ಮಾರಕ, ಭವ್ಯ ಪ್ರತಿಮೆ, ಮೈಸೂರಿನ ದಸರಾ ಆನೆಗಳೊಂದಿಗಿನ ಬಾಂಧವ್ಯವನ್ನು ವಿವರಿಸುವ ಐತಿಹಾಸಿಕ ಫಲಕಗಳು, ಸೌರ ಬೆಳಕು, ಮಳೆನೀರು ಕೊಯ್ಲು ಮತ್ತು ಭೂದೃಶ್ಯ ಉದ್ಯಾನಗಳಂತಹ ಪರಿಸರ ಸ್ನೇಹಿ ವೈಶಿಷ್ಟ್ಯಗಳನ್ನು ಅನಾವರಣಗೊಳಿಸಲು ಮನವಿ ಮಾಡಿದ್ದಾರೆ.
ಮೈಸೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು ಯೋಗ ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸಲು ಉದ್ದೇಶಿಸಲಾಗಿದ್ದು, ಇದು ಯೋಗ ಕ್ಷೇತ್ರದಲ್ಲಿ ಮೈಸೂರಿನ ಜಾಗತಿಕ ಕೊಡುಗೆಗಳನ್ನು ಗುರುತಿಸುದಂತಾಗುತ್ತದೆ. ಈ ಮೂಲಕ ಶ್ರೀ ಕೃಷ್ಣಮಾಚಾರ್ಯ, ಪಟ್ಟಾಭಿ ಜೋಯಿಸ್ ಮತ್ತು ಬಿ.ಕೆ.ಎಸ್. ಅಯ್ಯಂಗಾರ್ ಅವರಂತಹ ಯೋಗಗುರುಗಳ ದಂತಕಥೆಗಳ ಕೊಡುಗೆಗಳನ್ನು ಒಳಗೊಂಡಂತೆ ಯೋಗದ ಇತಿಹಾಸ ಮತ್ತು ಮಹತ್ವವನ್ನು ಸಾರ ಬಹುದಾಗಿದೆ.
ಈ ಎರಡು ಪ್ರಸ್ತಾವನೆಗಳು ₹ 20 ಕೋಟಿ ವೆಚ್ಚದವಗಿದ್ದು, ಈ ಯೋಜನೆಗಳು, ಸಾಂಸ್ಕೃತಿಕ, ಐತಿಹಾಸಿಕ ಮತ್ತು ಪ್ರವಾಸಿ ಕೇಂದ್ರವಾಗಿ ಮೈಸೂರಿನ ಗುರುತನ್ನು ಹೆಚ್ಚಿಸುವ ಗುರಿಯನ್ನು ಹೊಂದಿವೆ ಎಂದು ಸಂಸದ ಯದುವೀರ್ ತಿಳಿಸಿದ್ದಾರೆ.
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…
ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…