ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ
ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ ಕುರಿತು ವಿಷಯವನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಯಶಸ್ವಿಯಾಗಿದ್ದು, ಈ ನಿಟ್ಟಿನಲ್ಲಿ ತಂಬಾಕು ಮಾರಾಟಕ್ಕೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್, ಸಂಬಂಧಪಟ್ಟ ಸಚಿವರನ್ನು, ಹಿರಿಯ ಅಧಿಕಾರಿಗಳನ್ನು, ತಂಬಾಕು ಮಂಡಳಿಯ ಅಧಿಕಾರಿಗಳನ್ನು ಭೇಟಿ ಮಾಡಿ, ತಂಬಾಕು ಬೆಳೆಗಾರರಿಗೆ ಅನುಕೂಲವಾಗುವ ತೀರ್ಮಾನ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿತ್ತು, ಅದಕ್ಕೆ ಈಗ ಸೂಕ್ತ ಸ್ಪಂದನೆ ಸಿಕ್ಕಿದೆ ಎಂದರು.
ನೋಂದಾಯಿತ ಮತ್ತು ನೋಂದಾಯಿಸಿದ ಬೆಳೆಗಾರರ ಹೆಚ್ಚುವರಿ FCV ತಂಬಾಕು ಬೆಳೆಯನ್ನು ತಂಬಾಕು ಮಂಡಳಿಯು ಅಧಿಕೃತಗೊಳಿಸಿದ ಹರಾಜು ವೇದಿಕೆಗಳಲ್ಲಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ.
ಫ್ಲೂ ಕ್ಯೂರ್ಡ್ ವರ್ಜೀನಿಯಾ ತಂಬಾಕನ್ನು (FCV ತಂಬಾಕು) ತಂಬಾಕು ಮಂಡಳಿಯ ಅಧಿಕೃತ ಹರಾಜು ವೇದಿಕೆಗಳಲ್ಲಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ 1975 ರ ತಂಬಾಕು ಮಂಡಳಿ ಕಾಯ್ದೆ ಅಡಿಯಲ್ಲಿ ವಿಧಿಸಲಾದ ನಿರ್ಬಂಧಗಳನ್ನು ಸಡಿಲಿಸಲಾಗಿದೆ ಎಂದು ಸಂಸದರು ವಿವರಿಸಿದ್ದಾರೆ.
2025-26 ಋತುವಿನಲ್ಲಿ ಉತ್ಪಾದಿಸಿದ ಎಫ್‌ಸಿವಿ ತಂಬಾಕಿಗೆ ಪ್ರತಿ ನೋಂದಾಯಿತ ಬೆಳೆಗಾರರು ಪ್ರತಿ ಕಿಲೋಗ್ರಾಂಗೆ ಒಂದು ರೂಪಾಯಿ ಮತ್ತು ಮಾರಾಟದ ಆದಾಯದಲ್ಲಿ ಶೇ. 5ರಷ್ಟು ಮೊತ್ತವನ್ನು ತಂಬಾಕು ನಿಧಿಗೆ ಕೊಡುಗೆ ನೀಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ ಎಂದು ಸಂಸದರು ವಿವರಿಸಿದ್ದಾರೆ.
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…
ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…
ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…
ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…