ಮೈಸೂರು: ಮುಡಾ ಪ್ರಕರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಆಪ್ತ ರವಿಕುಮಾರ್ ಅವರಿಗೆ ಇಡಿ ತನಿಖಾ ಸಂಸ್ಥೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಕೆಲ ದಿನಗಳ ಹಿಂದೆ ಸಿದ್ದರಾಮಯ್ಯ ಆಪ್ತ ರವಿಕುಮಾರ್ ಅವರನ್ನು ಇಡಿ ಅಧಿಕಾರಿಗಳು ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಸಹಿಯನ್ನು ನಕಲು ಮಾಡಿರುವ ಆರೋಪದ ವಿಚಾರವಾಗಿ ಸುಮಾರು 12 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದು, ಇದೀಗ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಇಡಿ ಅಧಿಕಾರಿಗಳು ರವಿಕುಮಾರ್ ಅವರನ್ನು ಮುಡಾದ 50:50 ಅನುಪಾತದ ಬದಲಿ ನಿವೇಶನಗಳಿಗೆ ಸಂಬಂಧಿಸಿದಂತೆ ಪಾರ್ವತಿ ಸಿದ್ದರಾಮಯ್ಯ ಅವರ ಸಹಿಯನ್ನು ನಕಲು ಮಾಡಿದ್ದರು ಎಂಬ ಆರೋಪದ ಮೇಲೆ ದಾಖಲೆ ಸಮೇತ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಅದರಂತೆಯೇ ರವಿಕುಮಾರ್ ಅವರು ದಾಖಲೆ ಸಮೇತ ವಿಚಾರಣೆಗೆ ಹಾಜರಾಗಿ ತನಿಖೆ ಎದುರಿಸಿದ್ದರು. ಆದರೆ ಇದೀಗ ಅಧಿಕ ಮಾಹಿತಿಗಾಗಿ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.