Mysore
23
few clouds

Social Media

ಶನಿವಾರ, 28 ಮಾರ್ಚ್ 2026
Light
Dark

ಮುಡಾ ಪ್ರಕರಣ: ಮೈಸೂರು, ಮಂಡ್ಯ, ಬೆಂಗಳೂರು ಸೇರಿದಂತೆ 9 ಕಡೆ ಇಡಿ ದಾಳಿ

ಮೈಸೂರು: ಮುಡಾ 50;50 ಅನುಪಾತದಡಿ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು, ಬೆಂಗಳೂರು ಸೇರಿದಂತೆ 9 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈಗಾಗಲೇ ಇಡಿ ಅಧಿಕಾರಿಗಳು ಮುಡಾ ಕಚೇರಿ ಮೇಲೆ ದಾಳಿಮಾಡಿ ದಾಖಲೆಗಳನ್ನು ಸಂಗ್ರಹಿಸಿ, ಆ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಮಧ್ಯೆ ಬೆಂಗಳೂರು, ಮೈಸೂರು ಹಾಗೂ ಮಂಡ್ಯ ಸೇರಿದಂತೆ 9 ಕಡೆಗಳಲ್ಲಿ ಬೆಳ್ಳಂಬೆಳಿಗ್ಗೆ ಇ.ಡಿ.ಅಧಿಕಾರಿಗಳು ದಾಳಿ ಮಾಡಿ ದ್ದಾರೆ.

ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿರು ಓರ್ವ ಬಿಲ್ಡರ್‌ನ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಈ ಪ್ರಕರಣ ಸಂಬಂಧ ಮೈಸೂರಿನ ಏಳು-ಎಂಟು ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Tags:
error: Content is protected !!