Mysore
22
clear sky

Social Media

ಸೋಮವಾರ, 06 ಏಪ್ರಿಲ 2026
Light
Dark

ಮುಡಾ ಪ್ರಕರಣ: ಪ್ರಾಧಿಕಾರದ ಆರು ಮಂದಿಗೆ ಸಮನ್ಸ್‌ ನೀಡಿದ ಇಡಿ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಮುಡಾ ಕಚೇರಿಯ ಆರು ಮಂದಿ ಸಿಬ್ಬಂದಿಗೆ ಸಮನ್ಸ್‌ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಸಿಎಂ ಸಿದ್ದರಾಮಯ್ಯ ಹಾಗೂ ಇನ್ನಿತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿಕೊಂಡಿತ್ತು. ಹೀಗಾಗಿ ಮುಡಾ ಅಧಿಕಾರಿಗಳಿಗೆ ಸಮನ್ಸ್‌ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮುಡಾ ಕಚೇರಿಯಲ್ಲಿ ಎರಡು ದಿನಗಳ ಕಾಲ ತನಿಖೆ ನಡೆಸಿದ್ದು, ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದರು. ಇನ್ನೂ ಹೆಚ್ಚಿನ ತನಿಖೆಗಾಗಿ ಇ.ಡಿ ಆರು ಮಂದಿಗೆ ಬೇರೆ ಬೇರೆ ದಿನಾಂಕಗಳನ್ನು ನೀಡಿ ಬೆಂಗಳೂರಿನ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ ಎಂಬ ವಿಚಾರ ಮೂಲಗಳಿಂದ ತಿಳಿದಿದೆ.

ಅಲ್ಲದೇ ವಿಚಾರಣೆಗೆ ಹಾಜರಾಗುವ ಸಿಬ್ಬಂದಿಗಳಿಗೆ ಮುಡಾ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ತಮ್ಮೊಡನೆ ತರಬೇಕೆಂದು ಆದೇಶ ನೀಡಿದೆ.

Tags:
error: Content is protected !!