ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಮುಡಾ ಕಚೇರಿಯ ಆರು ಮಂದಿ ಸಿಬ್ಬಂದಿಗೆ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಸಿಎಂ ಸಿದ್ದರಾಮಯ್ಯ ಹಾಗೂ ಇನ್ನಿತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿಕೊಂಡಿತ್ತು. ಹೀಗಾಗಿ ಮುಡಾ ಅಧಿಕಾರಿಗಳಿಗೆ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮುಡಾ ಕಚೇರಿಯಲ್ಲಿ ಎರಡು ದಿನಗಳ ಕಾಲ ತನಿಖೆ ನಡೆಸಿದ್ದು, ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದರು. ಇನ್ನೂ ಹೆಚ್ಚಿನ ತನಿಖೆಗಾಗಿ ಇ.ಡಿ ಆರು ಮಂದಿಗೆ ಬೇರೆ ಬೇರೆ ದಿನಾಂಕಗಳನ್ನು ನೀಡಿ ಬೆಂಗಳೂರಿನ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ ಎಂಬ ವಿಚಾರ ಮೂಲಗಳಿಂದ ತಿಳಿದಿದೆ.
ಅಲ್ಲದೇ ವಿಚಾರಣೆಗೆ ಹಾಜರಾಗುವ ಸಿಬ್ಬಂದಿಗಳಿಗೆ ಮುಡಾ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ತಮ್ಮೊಡನೆ ತರಬೇಕೆಂದು ಆದೇಶ ನೀಡಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…