Mysore
24
scattered clouds
Light
Dark

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಆ.31ಕ್ಕೆ ಮುಂದೂಡಿಕೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಆಗಸ್ಟ್‌ 31 ಕ್ಕೆ ಮುಂದೂಡಿಕೆ ಮಾಡಿದೆ.

ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯು ಇಂದು(ಆ.28)ನಡೆಯಿತು. ಸಿಎಂ ಪರ ಹಿರಿಯ ವಕೀಲ ಅಭಿಷೇಕ್‌ ಮನು ಸಿಂಘ್ವಿ ವಾದ ಮಂಡಿಸಿದರು.

ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿರುವ ಅನುಮತಿಯನ್ನು ರದ್ದುಪಡಿಸಬೇಕು, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಕ್ರಮ ಸರಿಯಾಗಿಲ್ಲ. ಇದು ಮುಡಾ ಹಗರಣವೇ ಅಲ್ಲ. ಇದೊಂದು ಸಾಮಾನ್ಯವಾಗಿ ನಡೆದಿರುವ ಪ್ರಕ್ರಿಯೆ ಎಂದು ಅಭಿಷೇಕ್‌ ಮನು ಸಿಂಘ್ವಿ ವಾದಿಸಿದರು.

ವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಆ.31 ರ ಬೆಳಿಗ್ಗೆ 10:30ಕ್ಕೆ ವಿಚಾರಣೆ ಮುಂದೂಡಿದೆ. ಈ ಹಿಂದಿನ ಮಧ್ಯಂತರ ಆದೇಶವನ್ನು ಹೈಕೋರ್ಟ್‌ ಮುಂದುವರೆಸಿದ್ದು, ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೂ ಆದೇಶಿಸಿದೆ.

ಸಿಎಂ ಸಿದ್ದರಾಮಯ್ಯ ಅವರ ರಿಟ್‌ ಅರ್ಜಿಗೆ ರಾಜ್ಯಪಾಲರು ಮತ್ತು ದೂರುದಾರ ಪ್ರದೀಪ್‌ ಇಬ್ಬರು ಪ್ರಾತಿವಾದಿಗಳೂ ಇದುವರೆಗೆ ಆಕ್ಷೇಪಣೆ ಸಲ್ಲಿಸಿಲ್ಲ.