ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 31 ಕ್ಕೆ ಮುಂದೂಡಿಕೆ ಮಾಡಿದೆ.
ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯು ಇಂದು(ಆ.28)ನಡೆಯಿತು. ಸಿಎಂ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.
ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿರುವ ಅನುಮತಿಯನ್ನು ರದ್ದುಪಡಿಸಬೇಕು, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಕ್ರಮ ಸರಿಯಾಗಿಲ್ಲ. ಇದು ಮುಡಾ ಹಗರಣವೇ ಅಲ್ಲ. ಇದೊಂದು ಸಾಮಾನ್ಯವಾಗಿ ನಡೆದಿರುವ ಪ್ರಕ್ರಿಯೆ ಎಂದು ಅಭಿಷೇಕ್ ಮನು ಸಿಂಘ್ವಿ ವಾದಿಸಿದರು.
ವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಆ.31 ರ ಬೆಳಿಗ್ಗೆ 10:30ಕ್ಕೆ ವಿಚಾರಣೆ ಮುಂದೂಡಿದೆ. ಈ ಹಿಂದಿನ ಮಧ್ಯಂತರ ಆದೇಶವನ್ನು ಹೈಕೋರ್ಟ್ ಮುಂದುವರೆಸಿದ್ದು, ವಿಚಾರಣೆ ಮುಂದೂಡುವಂತೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೂ ಆದೇಶಿಸಿದೆ.
ಸಿಎಂ ಸಿದ್ದರಾಮಯ್ಯ ಅವರ ರಿಟ್ ಅರ್ಜಿಗೆ ರಾಜ್ಯಪಾಲರು ಮತ್ತು ದೂರುದಾರ ಪ್ರದೀಪ್ ಇಬ್ಬರು ಪ್ರಾತಿವಾದಿಗಳೂ ಇದುವರೆಗೆ ಆಕ್ಷೇಪಣೆ ಸಲ್ಲಿಸಿಲ್ಲ.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…