ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರ ವಿರುದ್ಧ ಲೋಕಾಯುಕ್ತ ಪೊಲೀಸರು ಇಂದಿನಿಂದ ತನಿಖೆ ಆರಂಭಿಸಲಿದ್ದಾರೆ.
ಈಗಾಗಲೇ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಲೋಕಾ ಪೊಲೀಸರು ಮೊದಲಿಗೆ ದೂರಾದರರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಿ, ದೂರುದಾರರ ಬಳಿ ದಾಖಲೆಯನ್ನು ಸಂಗ್ರಹಿಸಲಿದ್ದಾರೆ.
ಇತ್ತ ನಿವೃತ್ತ.ನ್ಯಾ ದೇಸಾಯಿ ತನಿಖಾ ಸಮಿತಿ ಬಳಿಯಿರುವ ದಾಖಲೆ ಪಡೆಯಲು ಕಾನೂನು ಪ್ರಕ್ರಿಯೆ ಆರಂಭವಾಗಲಿದೆ. ದಾಖಲೆ ಸಿಕ್ಕ ಬಳಿಕ ಮುಡಾ ಪ್ರಕರಣದಲ್ಲಿ ಸಿಲುಕಿರುವ ಎಲ್ಲಾರಿಗೂ ಹಂತ ಹಂತವಾಗಿ ನೋಟಿಸ್ ಮಾಡುವ ಸಾಧ್ಯತೆಯಿದೆ.
ಮುಡಾ ಪ್ರಕರಣ ಸಂಬಂಧ ಸಿಆರ್‌ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ 90ದಿನಗಳೊಳಗೆ ವರದಿ ನೀಡುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದ್ದರು.