ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರದ 50;50ಅನುಪಾತದ ನಿವೇಶನ ಹಾಗೂ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ 14 ಬದಲಿ ನಿವೇಶನಗಳ ಸಂಬಂಧ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಪೊಲೀಸರು ಗುರುವಾರ ಬಿಜೆಪಿಯ ಮಾಜಿ ಶಾಸಕರಾದ ಎಸ್.ಎ.ರಾಮದಾಸ್ ಹಾಗೂ ಎಲ್.ನಾಗೇಂದ್ರ ಅವರನ್ನು ಕರೆಸಿ ಮಾಹಿತಿ ಸಂಗ್ರಹಿಸಿದ್ದಾರೆ.
ಗುರುವಾರ ಮಧ್ಯಾಹ್ನ ಕೆ.ಆರ್. ಕ್ಷೇತ್ರದ ಮಾಜಿ ಶಾಸಕ ಎಸ್.ಎ.ರಾಮದಾಸ್ ಅವರು ನಗರದ ಲೋಕಾಯುಕ್ತ ಕಚೇರಿಗೆ ಆಗಮಿಸಿದರು. ಸುಮಾರು ಒಂದು ತಾಸು ಅವರನ್ನು ವಿಚಾರಣೆ ನಡೆಸಿದ ಲೋಕಾ ಪೊಲೀಸರು ಅವರಿಂದ ಕೆಲ ಮಾಹಿತಿಗಳನ್ನು ಪಡೆದುಕೊಂಡರು.
ಲೋಕಾಯುಕ್ತ ವಿಚಾರಣೆ ಮುಗಿಸಿ ವಾಪಸ್ ತೆರಳುವ ವೇಳೆ ಮಾಧ್ಯಮದವರು ಅವರನ್ನು ಮಾತನಾಡಿಸಲು ಮುಂದಾದರು. ಈ ವೇಳೆ ನಾನು ಮುಡಾ ವಿಚಾರವಾಗಿ ಹಿಂದೆಯೂ ಕಾಮೆಂಟ್ ಮಾಡಿಲ್ಲ, ಈಗಲೂ ಕಾಮೆಂಟ್ ಮಾಡಲ್ಲ. ನೋ ರಿಯಾಕ್ಷನ್ ಎಂದು ಹೇಳಿ ರಾಮದಾಸ್ ತೆರಳಿದರು.
ರಾಮದಾಸ್ ಅವರಿಂದ ಮಾಹಿತಿ ಸಂಗ್ರಹಿಸಿದ ನಂತರ ಚಾಮರಾಜ ಕ್ಷೇತ್ರದ ಮಾಜಿ ಶಾಸಕ ಎಲ್.ನಾಗೇಂದ್ರ ಅವರು ಲೋಕಾ ಕಚೇರಿಗೆ ಆಗಮಿಸಿದರು. ಅವರು ಕೂಡ ಸುಮಾರು ಒಂದು ತಾಸು ಲೋಕಾ ಕಚೇರಿಯಲ್ಲಿ ಹಾಜರಿದ್ದು, ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…
ಮೈಸೂರು: ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…
ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…
ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…
ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು " ನಾನು…
ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…