Mysore
16
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಮುಡಾ ಪ್ರಕರಣ| ಲೋಕಾಯುಕ್ತ ಎಸ್‌ಪಿ ವಿರುದ್ಧ ಸ್ನೇಹಮಯಿ ಕೃಷ್ಣ ಆರೋಪ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ವರದಿ ನೀಡಲು ಲೋಕಾಯುಕ್ತ ಎಸ್‌ಪಿ ಸತಾಯಿಸಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಲ್ಲಿನ ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದ್ದೇಶ್‌ ಅವರು ಆರೋಪಿಗಳೊಂದಿಗೆ ಶಾಮೀಲಾಗಿ ರಕ್ಷಣೆ ನೀಡುತ್ತಿದ್ದಾರೆ. ಅಲ್ಲದೇ ತನಿಖಾ ವರದಿ ನೀಡಲು ಸತಾಯಿಸುತ್ತಿದ್ದಾರೆ. ಹೀಗಾಗಿ ಶೀಘ್ರದಲ್ಲೇ ಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸುತ್ತೇನೆ ಎಂದು ಹೇಳಿದರು.

ಈ ಪ್ರಕರಣದ ವಿರುದ್ಧ ನನ್ನ ಆತ್ಮಸ್ಥೈರ್ಯ ಕುಗ್ಗಿಸಲು ಯಾರಿಂದಲೂ ಸಾಧ್ಯವಿಲ್ಲ. ನಾನೇ ವಕೀಲ ಸಹಾಯ ಪಡೆದು ವಾದ ಮಂಡಿಸುತ್ತೇನೆ. ಇನ್ನು ಲೋಕಾಯುಕ್ತ ಎಸ್‌ಪಿ ಅವರು ಫೋನ್‌ ಕರೆ ಮಾಡಿದರೂ ಉತ್ತರಿಸುತ್ತಿಲ್ಲ. ದೂರುದಾರರಿಗೆ ಕಿರುಕುಳ ನೀಡುವುದೇ ಅವರ ಪ್ರಮುಖ ಉದ್ದೇಶವಾಗಿದೆ ಎಂದು ವಾಗ್ದಾಳಿ ನಡೆಸಿದರು.

Tags:
error: Content is protected !!