ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ವರದಿ ನೀಡಲು ಲೋಕಾಯುಕ್ತ ಎಸ್‌ಪಿ ಸತಾಯಿಸಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ.
ಮೈಸೂರಿನಲ್ಲಿ ಇಂದು(ಫೆಬ್ರವರಿ.22) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಲ್ಲಿನ ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದ್ದೇಶ್ ಅವರು ಆರೋಪಿಗಳೊಂದಿಗೆ ಶಾಮೀಲಾಗಿ ರಕ್ಷಣೆ ನೀಡುತ್ತಿದ್ದಾರೆ. ಅಲ್ಲದೇ ತನಿಖಾ ವರದಿ ನೀಡಲು ಸತಾಯಿಸುತ್ತಿದ್ದಾರೆ. ಹೀಗಾಗಿ ಶೀಘ್ರದಲ್ಲೇ ಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸುತ್ತೇನೆ ಎಂದು ಹೇಳಿದರು.
ಈ ಪ್ರಕರಣದ ವಿರುದ್ಧ ನನ್ನ ಆತ್ಮಸ್ಥೈರ್ಯ ಕುಗ್ಗಿಸಲು ಯಾರಿಂದಲೂ ಸಾಧ್ಯವಿಲ್ಲ. ನಾನೇ ವಕೀಲ ಸಹಾಯ ಪಡೆದು ವಾದ ಮಂಡಿಸುತ್ತೇನೆ. ಇನ್ನು ಲೋಕಾಯುಕ್ತ ಎಸ್‌ಪಿ ಅವರು ಫೋನ್ ಕರೆ ಮಾಡಿದರೂ ಉತ್ತರಿಸುತ್ತಿಲ್ಲ. ದೂರುದಾರರಿಗೆ ಕಿರುಕುಳ ನೀಡುವುದೇ ಅವರ ಪ್ರಮುಖ ಉದ್ದೇಶವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…