ಮೈಸೂರು

ಮುಡಾ ಪ್ರಕರಣ: ಮತ್ತೊಂದು ಸಾಕ್ಷಿ ಬಯಲು ಮಾಡಿದ ದೂರುದಾರ ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಪಾತ್ರ ಏನು ಇಲ್ಲವೆಂದು ಹೇಳುತ್ತಾರೆ. ಆದರೆ, ಸಿಎಂ ಪ್ರಭಾವ ಬೀರಿದ್ದಾರೆ ಎಂಬುದಕ್ಕೆ ಸಾಕ್ಷಿ ದೊರೆತಿದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ಸಾಕ್ಷಿ ತೆರೆದಿಟ್ಟಿದ್ದಾರೆ.

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಪ್ರಭಾವವಿದೆ ಎಂಬ ಬಗ್ಗೆ ಸಾಕ್ಷಿ ಸಮೇತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಸ್ನೇಹಮಯಿ ಕೃಷ್ಣ, ನಿವೇಶನಗಳನ್ನು ಪಡೆಯುವಾಗ ಕ್ರಯಪತ್ರ ನೋಂದಣಿ ಮಾಡಿಸಿಕೊಳ್ಳುವವರು ನೋಂದಣಿಗೆ ಬೇಕಾದ ಶುಲ್ಕವನ್ನು ಪಾವತಿ ಮಾಡಬೇಕು. ಅದೇ ರೀತಿಯಲ್ಲಿ ಮುಡಾದ ನಿವೇಶನಗಳನ್ನು ಪಡೆಯುವಾಗ ಎನ್.ಮಂಜುನಾಥ್‌ ಅವರು ಮುದ್ರಾಂಕ ಶುಲ್ಕ ಪಾವತಿ ಮಾಡಿದ್ದಾರೆ. ಆದರೆ, ಮುಡಾದ 50:50 ಅನುಪಾತದ ಬದಲಿ ನಿವೇಶನಗಳನ್ನು ಪಾರ್ವತಿ ಸಿದ್ದರಾಮಯ್ಯರವರು ಪಡೆಯುವಾಗ ಮುಡಾದ ವಿಶೇಷ ತಹಸೀಲ್ದಾರ್‌ ಮುದ್ರಾಂಕ ಶುಲ್ಕ ಪಾವತಿ ಮಾಡಿದ್ದಾರೆ. ನನ್ನ ಆರೋಪಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ? ಸಿದ್ದರಾಮಯ್ಯನವರೇ ಈ ವಿಚಾರ ಕುರಿತು ರಾಜ್ಯದ ಜನತೆಗೆ ಏನೆಂದು ಉತ್ತರಿಸುತ್ತಿರಾ? ಎಂದು ಕೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ಮುಡಾ ಕಚೇರಿಗೆ ನಿವೃತ್ತ ನ್ಯಾಯಮೂರ್ತಿ ದೇಸಾಯಿ ಭೇಟಿ

ಮೈಸೂರು: ರಾಜ್ಯದಲ್ಲಿ ಮೈಸೂರು ಮುಡಾ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಇಂದು ತನಿಖೆಯ ಭಾಗವಾಗಿ ನಿವೃತ್ತ ನ್ಯಾಯಮೂರ್ತಿ ದೇಸಾಯಿ ಅವರು…

9 hours ago

ಪ್ರಧಾನಿ ನರೇಂದ್ರ ಮೋದಿ ಸಂವಿಧಾನವನ್ನೇ ಓದಿಲ್ಲ ಎಂದ ರಾಹುಲ್‌ ಗಾಂಧಿ

ಪುಣೆ: ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನವನ್ನೇ ಓದಿಲ್ಲ. ಈ ಬಗ್ಗೆ ನನಗೆ ಗ್ಯಾರಂಟಿಯಿದೆ ಎಂದು ಲೋಕಸಭೆ ವಿರೋಧ ಪಕ್ಷದ…

10 hours ago

ಆದಿವಾಸಿಗಳ ಸಮಸ್ಯೆ ಆಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿರುವ ಉದ್ಬೂರು ಹಾಡಿ ಹಾಗೂ ಕೆರೆಹಾಡಿಗೆ ಸಿಎಂ ಸಿದ್ದರಾಮಯ್ಯ ಅವರಿಂದು ಭೇಟಿ ನೀಡಿ, ಆದಿವಾಸಿಗಳ…

10 hours ago

ರಾಜ್ಯದಲ್ಲಿ ನವೆಂಬರ್.‌14ರಿಂದ ಮತ್ತೆ ಮಳೆಯ ಅಬ್ಬರ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮಳೆ ನಿಲ್ಲುವ ಮುನ್ಸೂಚನೆ ಕಾಣುತ್ತಿಲ್ಲ. ಕಳೆದ ಕೆಲ ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ…

10 hours ago

ಶಬರಿಮಲೆಗೆ ತೆರಳುವವರಿಗೆ ಸಿಹಿಸುದ್ದಿ ನೀಡಿದ ಕೆಎಸ್‌ಆರ್‌ಟಿಸಿ

ಬೆಂಗಳೂರು: ಕರ್ನಾಟಕದಿಂದ ಶಬರಿಮಲೆ ಯಾತ್ರೆಗೆ ತೆರಳುವವರಿಗೆ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ ನೀಡಿದ್ದು, ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ವೋಲ್ವೋ ಬಸ್…

11 hours ago

ಕಾಂಗ್ರೆಸ್‌ ವಿರುದ್ಧ ಮತ್ತೆ ಗುಡುಗಿದ ಪ್ರಧಾನಿ ನರೇಂದ್ರ ಮೋದಿ

ಮುಂಬೈ: ರಾಜ್ಯದ ಅಭಿವೃದ್ಧಿಯನ್ನು ಕುಂಠಿತಗೊಳಿಸುವಲ್ಲಿ ಕಾಂಗ್ರೆಸ್‌ ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ…

11 hours ago