ಮೈಸೂರು: ಮುಡಾ ಪ್ರಕರಣದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಅವರು ಅಕ್ರಮವಾಗಿ 50;50 ಅನುಪಾತದಲ್ಲಿ ಸುಮಾರು 19 ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು,ಈ ಸಂಬಂಧ ತನಿಖೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿಕೃಷ್ಣ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ.
ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ ಸ್ನೇಹಮಯಿ ಕೃಷ್ಣ ಶಾಸಕ ಜಿಟಿ ದೇವೇಗೌಡ ಹಾಗೂ ಪುತ್ರ ಹರೀಶ್ ಗೌಡ ವಿರುದ್ಧ ದೂರು ಸಲ್ಲಿಸಿದ್ದಾರೆ. ಶಾಸಕ ಜಿ.ಟಿ ದೇವೇಗೌಡರ ಕುಟುಂಬ ಸರ್ವೇ ನಂ ೮೧/೨ ರಲ್ಲಿ ೨.೨೨ ಎಕರೆ ಜಮೀನಿಗೆ ಪರಿಹಾರ ನೀಡಿಲ್ಲ ಎಂದು ೧೯ ನಿವೇಶನ ಪಡೆದಿದ್ದು, ಈ ಮೂಲಕ ಶಾಸಕ ಜಿಟಿ ದೇವೇಗೌಡರು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಹಾಗೆಯೇ ಮಾಲೀಕನ ಮನೆಗೆ ತೆರಳಿ ಮಾತುಕತೆ ನಡೆಸಿರುವ ಫೋಟೋವನ್ನು ಸ್ನೇಹಮಯಿ ಕೃಷ್ಣ ಬಿಡುಗಡೆ ಮಾಡಿದ್ದಾರೆ.