high court of karnataka
ಬೆಂಗಳೂರು : ಸಿಎಂ ಸಿದ್ದರಾಮಯ್ಯ , ಪತ್ನಿ ಪಾರ್ವತಿ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ತನಿಖಾ ಸ್ಥಿತಿಗತಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ಖಾಸಗಿ ದೂರು ವಿಚಾರಣೆ ನಡೆಯಿತು.
ವಿಚಾರಣೆಗೂ ಮುನ್ನ ಲೋಕಾಯುಕ್ತ ತನಿಖಾಧಿಕಾರಿ ಈವರೆಗಿನ ತನಿಖಾ ಪ್ರಗತಿ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದರು.
ಈ ವೇಳೆ, ದೂರುದಾರ ಸ್ನೇಹಮಯಿ ಕೃಷ್ಣ ಅವರು, “ತಾವು ಸಲ್ಲಿಸಿದ ದಾಖಲೆಗಳನ್ನು ಲೋಕಾಯುಕ್ತ ಪೊಲೀಸರು ಪರಿಗಣಿಸಿಲ್ಲ. ದಾಖಲೆ ಪರಿಗಣಿಸದೇ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಅವರ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಲಾಗಿದೆ. ಹೀಗಾಗಿ ತನಿಖಾಧಿಕಾರಿ ವಿರುದ್ಧ ಕ್ರಮ ಕೋರಿರುವ ಅರ್ಜಿಗಳನ್ನು ಪರಿಗಣಿಸಬೇಕು” ಎಂದು ಮನವಿ ಮಾಡಿದರು. ಎಲ್ಲ ದಾಖಲೆಗಳನ್ನು ಪರಿಗಣಿಸಲಾಗಿದೆ ಎಂದು ಲೋಕಾಯುಕ್ತ ಎಸ್ಪಿಪಿ ಪೀಠಕ್ಕೆ ತಿಳಿಸಿದರು. ನ್ಯಾಯಾಲಯ ಜುಲೈ 28ರಂದು ತನಿಖಾ ಸ್ಥಿತಿಗತಿ ವರದಿ ಸಲ್ಲಿಸಲು ಸೂಚನೆ ನೀಡಿತು.
ಲೋಕಾಯುಕ್ತ ತನಿಖಾಧಿಕಾರಿಯು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ ಸೆಕ್ಷನ್ 17(A) ಅಡಿ ಸಕ್ಷಮ ಪ್ರಾಧಿಕಾರಕ್ಕೆ ಅನುಮತಿ ಕೋರಿರುವುದರಿಂದ ತನಿಖಾ ವರದಿ ಸಲ್ಲಿಸಲು ಕಾಲಾವಕಾಶ ಕೋರಿದ್ದರು.
ಪ್ರಕರಣ ಸಂಬಂಧ ದೂರುದಾರ ಸ್ನೇಹಮಯಿ ಕೃಷ್ಣ, ವಿಚಾರಣೆ ಮುಂದೂಡಿಕೆಗೆ ಗಂಭೀರ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ ನ್ಯಾಯಾಧೀಶರು, ತನಿಖಾಧಿಕಾರಿಗಳು ಮುಚ್ಚಿದ ಲಕೋಟೆಯಲ್ಲಿ ತನಿಖಾಧಿಕಾರಿತ ತನಿಖೆಗೆ ಸಂಬಂಧಿಸಿದಂತೆ ಒಂದಷ್ಟು ದಾಖಲೆ ಸಲ್ಲಿಸಿದ್ದಾರೆ. ಆದರೂ ಕಾಲಾವಕಾಶ ಕೋರುತ್ತಿರುವುದು ತೃಪ್ತಿಕರವಲ್ಲ ಎಂದು ನ್ಯಾಯಾಲಯ ತಿಳಿಸಿತ್ತು.
ಅಲ್ಲದೆ, ಸಿಆರ್ಪಿಸಿ ಸೆಕ್ಷನ್ 200ರ ಅಡಿ ಸಲ್ಲಿಸಿರುವ ಬಿ ವರದಿ ವಿರುದ್ಧ ಸೂಕ್ತ ಆದೇಶ ಮಾಡಲು ಅರ್ಜಿದಾರರು ಮನವಿ ಸಲ್ಲಿಸಿದ್ದಾರೆ. ಈ ಕೋರಿಕೆಯನ್ನು ದಾಖಲೆಯಲ್ಲಿ ಸ್ವೀಕರಿಸಲಾಗಿದೆ. ತನಿಖೆ ಸಂಪೂರ್ಣಗೊಂಡ ಬಳಿಕ ಬಿ ವರದಿ ಪರಿಗಣಿಸುವುದು ಸೂಕ್ತ ಎಂದು ಈ ನ್ಯಾಯಾಲಯ ಈಗಾಗಲೇ ಹೇಳಿದೆ. ನ್ಯಾಯಾಲಯದ ಪ್ರಕ್ರಿಯೆ ವಿಳಂಬಗೊಳಿಸಿರುತ್ತಿರುವ ಬಗ್ಗೆ ಅರ್ಜಿದಾರ ಸ್ನೇಹಮಯಿ ಕೃಷ್ಣ ಆತಂಕ ವ್ಯಕ್ತಪಡಿಸಿರುವುದನ್ನು ನ್ಯಾಯಾಲಯವು ಪರಿಗಣಿಸಿದೆ. ಉಭಯ ಪಕ್ಷಕಾರರ ವಾದವನ್ನು ಪರಿಗಣಿಸಿ ಸ್ಥಿತಿಗತಿಗೆ ಸಂಬಂಧಿಸಿದಂತೆ ತನಿಖಾಧಿಕಾರಿಯು ಅಫಿಡವಿಟ್ ರೂಪದಲ್ಲಿ ವಿಸ್ತೃತ ವರದಿ ಸಲ್ಲಿಸಬೇಕು ಎಂದು ನ್ಯಾಯಾಲಯ ಸೂಚನೆ ನೀಡಿದೆ.
ಲೋಕಾಯುಕ್ತ ಪೊಲೀಸರ ಪರವಾಗಿ ಹಾಜರಾಗಿದ್ದ ವಿಶೇಷ ಸರ್ಕಾರಿ ಅಭಿಯೋಜಕರು, ಕಳೆದ ವಿಚಾರಣೆಯಲ್ಲಿ ನ್ಯಾಯಾಲಯವು ತನಿಖೆ ಮುಂದುವರಿಸಲು ಆದೇಶಿಸಿತ್ತು. ಅದರ ಭಾಗವಾಗಿ ಕೆಲವು ಸರ್ಕಾರಿ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ ಸೆಕ್ಷನ್ 17ಎ ಅಡಿ ರಾಜ್ಯ ಸರ್ಕಾರಕ್ಕೆ ಅನುಮತಿ ಕೋರಲಾಗಿದೆ. ಹೀಗಾಗಿ, ಕಾಲಾವಕಾಶ ನೀಡಬೇಕು ಎಂದು ಕೋರಿದರು. ಇದಕ್ಕೆ ದೂರುದಾರ ಸ್ನೇಹಮಯಿ ಕೃಷ್ಣ, ತನಿಖಾಧಿಕಾರಿಗಳು ಉದ್ದೇಶಪೂರ್ವಕವಾಗಿ ತನಿಖೆ ನಡೆಸಲು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಕಾಲಾವಕಾಶ ನೀಡಬಾರದು ಎಂದು ಕೋರಿದರು.
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ…
ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…
ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…
ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…