ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಅಕ್ರಮ ಪ್ರಕರಣದಲ್ಲಿ ಮೊದಲ ವಿಕೆಟ್ ಪತನವಾಗಿದೆ. ಮುಡಾದ ಈ ಹಿಂದಿನ ಆಯುಕ್ತ ಜಿ.ಟಿ ದಿನೇಶ್‌ಕುಮಾರ್ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ.
ಕೆ.ಎ.ಎಸ್ ಅಧಿಕಾರಿ ದಿನೇಶ್ ಕುಮಾರ್ ಅವರ ಮೇಲೆ ಮುಡಾ ಅಕ್ರಮ ಕುರಿತು ಗಂಭೀರ ಆರೋಪಗಳಿವೆ ಅನ್ನೋ ಕಾರಣಕ್ಕೆ ಅಮಾನತು ಮಾಡಲಾಗಿದೆ. ದಿನೇಶ್ ಕುಮಾರ ಮುಡಾದಲ್ಲಿ ಆಯುಕ್ತರಾಗಿದ್ದ ವೇಳೆ ನಡೆದಿದೆ ಎನ್ನಲಾದ ಅಕ್ರಮಗಳ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿದು ಬಂದಿದೆ.