ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆಯಲ್ಲಿ ನಡೆದಿರುವ ನೂರಾರು ಕೋಟಿ ರೂ. ಗಳ ಹಗರಣ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಇಂದು(ಜೂ.30) ಕರ್ನಾಟಕ ಸೇನಾಪಡೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮುಡಾ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಕೋಟ್ಯಂತರ ರೂಪಾಯಿ ಹಗರಣ ಮಾಡಿರುವ ಮುಡ ಆಯುಕ್ತರ ಕ್ರಮ ಖಂಡಿಸಿ ಆಕ್ರೋಶ ಹೊರಹಾಕಿದರು. ಜತೆ ಆಯುಕ್ತರನ್ನು ಈ ಕೂಡಲೇ ಬಂಧಿಸಿ ಎಂದು ಒತ್ತಾಯಿಸಿದರು.
ಸುಮಾರು ನಾಲ್ಕರಿಂದ ಐದು ಸಾವಿರಕ್ಕೂ ಹೆಚ್ಚು ನಿವೇಶನಗಳನ್ನು ಅಕ್ರಮವಾಗಿ ಹಂಚಿ, ಮೈಸೂರಿನ ಇತಿಹಾಸದಲ್ಲಿಯೇ ಭಾರೀ ಪ್ರಮಾಣದ ಭೂ ದರೋಡೆ ಮಾಡಿರುವುದು ಮುಡಾದಲ್ಲಿ ಬೆಳಕಿಗೆ ಬಂದಿರುವುದು ಅತ್ಯಂತ ಖಂಡನೀಯ. ಬದಲಿ ನಿವೇಶನ ನೀಡದಂತೆ ಎರಡು ವರ್ಷದ ಹಿಂದೆಯೇ ಸರ್ಕಾರ ಆದೇಶ ಮಾಡಿದೆ. ಬದಲಿ ನಿವೇಶನದ ಬಗ್ಗೆ ಅತಿ ಅಗತ್ಯ ಬಿದ್ದರೆ ಮಾತ್ರ ಸರ್ಕಾರದ ಅನುಮತಿ ಪಡೆದು ಹಂಚಿಕೆಗೆ ತಾಕೀತು ಮಾಡಿದೆ. ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿ ನಿಯಮ ಬಾಹಿರವಾಗಿ ಬದಲಿ ನಿವೇಶನ ಹಂಚಿಕೆ ಮಾಡಿ ಸುಮಾರು 3 ಸಾವಿರ ಕೋಟಿ ಹಗರಣ ಮಾಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಸರ್ಕಾರ ಈ ಬಗ್ಗೆ ಕೂಡಲೇ ತನಿಖೆ ಮಾಡಿ, ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸಬೇಖು. ಜೊತೆಗೆ ಅಕ್ರಮ ಮಾರಾಟ ಮಾಡಿ ಬದಲಿ ನಿವೇಶನ ನೀಡಿರುವ ನಿವೇಶನಗಳನ್ನು ಹಿಂಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ಸೇನಾಪಡೆ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ಪಧಾಧಿಕಾರಿಗಳಾದ ಪ್ರಭುಶಂಕರ್, ಎಂ ಬಿ, ಕೃಷ್ಣಪ್ಪ, ಕುಮಾರ್ ಗೌಡ, ಶಿವಲಿಂಗಯ್ಯ, ಅಂಬಾ ಅರಸ್, ನೇಹಾ, ಮಂಜುಳಾ, ಭಾಗ್ಯಮ್ಮ, ನಾರಾಯಣಗೌಡ, ಪರಿಸರ ಚಂದ್ರು, ವಿಜಯೇಂದ್ರ, ಆನಂದ್, ರಾಮಕೃಷ್ಣ, ರವಿ ಒಲಂಪಿಯ, ರಾಧಾಕೃಷ್ಣ, ಅಕ್ಬರ್, ರವೀಶ್, ಸ್ವಾಮಿ ಗೌಡ, ಆರ್ ಮಹದೇವ್, ದರ್ಶನ್ ಗೌಡ, ಪ್ರದೀಪ್, ದಿನೇಶ್, ರಘು ಅರಸ್, ವಿಷ್ಣು, ಬಸವರಾಜು, ಹನುಮಂತಯ್ಯ, ರಮೇಶ್, ಗಣೇಶ್, ಶಿವನಾಯಕ್, ಹಾಗೂ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಫೇಸ್ಬುಕ್ನಲ್ಲಿ ಜೀವ ಬೆದರಿಕೆ…
ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…
ಮಡಿಕೇರಿ: ಮಾರ್ಚ್ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…
ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…
ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ…
ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…